IND vs ENG: ಇಂಗ್ಲೆಂಡ್ ವಿರುದ್ಧ ಕ್ರಿಕೆಟ್ ದೇವರ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!

IND vs ENG, ICC World Cup 2023: ಈ ಬಾರಿಯ ವಿಶ್ವಕಪ್‌ನಲ್ಲಿ ಅಜೇಯ ಓಟ ಮುಂದುವರೆಸಿರುವ ಇದೇ ಭಾನುವಾರ (ಅಕ್ಟೋಬರ್ 29) ತನ್ನ ಆರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ.

ಪೃಥ್ವಿಶಂಕರ
|

Updated on: Oct 27, 2023 | 7:38 PM

ಈ ಬಾರಿಯ ವಿಶ್ವಕಪ್‌ನಲ್ಲಿ ಅಜೇಯ ಓಟ ಮುಂದುವರೆಸಿರುವ ಇದೇ ಭಾನುವಾರ (ಅಕ್ಟೋಬರ್ 29) ತನ್ನ ಆರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ.

1 / 10
ಈ ವಿಶ್ವಕಪ್‌ನಲ್ಲಿ ಕೊಹ್ಲಿ ಅಮೋಘ ಫಾರ್ಮ್‌ನಲ್ಲಿದ್ದು, 5 ಇನ್ನಿಂಗ್ಸ್‌ಗಳಲ್ಲಿ 354 ರನ್ ಸಿಡಿಸಿದ್ದಾರೆ. ಈ ಮೂಲಕ ಈ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

2 / 10
ಇನ್ನು ಇಂಗ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿರುವ ವಿರಾಟ್, ಆಡಿರುವ 35 ಏಕದಿನ ಪಂದ್ಯಗಳಲ್ಲಿ 3 ಶತಕ ಮತ್ತು 9 ಅರ್ಧ ಶತಕಗಳ ಸಹಾಯದಿಂದ 43.22 ಸರಾಸರಿಯಲ್ಲಿ 1340 ರನ್ ಗಳಿಸಿದ್ದಾರೆ.

3 / 10
ಇಂಗ್ಲೆಂಡ್ ವಿರುದ್ಧದ ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಕೊಹ್ಲಿಗಿಂತ ಹೆಚ್ಚು ರನ್ ಗಳಿಸಿರುವುದು ಸಚಿನ್ ತೆಂಡೂಲ್ಕರ್ ಮಾತ್ರ.

4 / 10
ಸಚಿನ್ ಇಂಗ್ಲೆಂಡ್ ವಿರುದ್ಧದ 37 ಏಕದಿನ ಪಂದ್ಯಗಳಲ್ಲಿ 44.09 ಸರಾಸರಿಯಲ್ಲಿ 2 ಶತಕ ಮತ್ತು 10 ಅರ್ಧ ಶತಕಗಳ ಸಹಾಯದಿಂದ 1455 ರನ್ ಗಳಿಸಿದ್ದಾರೆ.

5 / 10
ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ 2 ಏಕದಿನ ಪಂದ್ಯಗಳಲ್ಲಿ ಕೊಹ್ಲಿ 74 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಗರಿಷ್ಠ ಸ್ಕೋರ್ 37 ರನ್ ಆಗಿದೆ.

6 / 10
ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ 95 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿದರು. ಈ ಮೂಲಕ 20 ವರ್ಷಗಳಲ್ಲಿ ಐಸಿಸಿ ಈವೆಂಟ್‌ಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಮೊದಲ ಜಯವನ್ನು ನೀಡಿದರು. ಆ ಪಂದ್ಯದಲ್ಲಿ ಕೇವಲ 5 ರನ್‌ಗಳಿಂದ ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ವಿಶ್ವ ದಾಖಲೆಯನ್ನು ಮುರಿಯುವುದನ್ನು ಕೊಹ್ಲಿ ತಪ್ಪಿಸಿಕೊಂಡರು.

7 / 10
ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 48ನೇ ಶತಕ ಸಿಡಿಸಿದ್ದರು. ಅದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ 85 ರನ್ ಸಿಡಿಸಿದ್ದ ವಿರಾಟ್, ಅಫ್ಘಾನಿಸ್ತಾನ ವಿರುದ್ಧ ಭಾರತದ ಗೆಲುವಿನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದರು.

8 / 10
ಈ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ಕೊಹ್ಲಿ ಮುರಿಯಬಹುದು ಎಂದು ಅಭಿಮಾನಿಗಳು ಮತ್ತು ಕ್ರಿಕೆಟ್ ತಜ್ಞರು ಭಾವಿಸಿದ್ದಾರೆ. ಸಚಿನ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ವಿಶ್ವಕಪ್‌ನಲ್ಲಿಯೇ ಕೊಹ್ಲಿ ಮುರಿಯಲಿದ್ದಾರೆ ಎಂದು ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.

9 / 10
ಒಂದೆಡೆ ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ತಂಡ ಸೆಮಿಫೈನಲ್ ರೇಸ್‌ನಲ್ಲಿ ಉಳಿಯಲು ಗೆಲುವಿಗಾಗಿ ಹೋರಾಡಲಿದೆ.

10 / 10
Follow us