IND vs ENG: ಶತಕ, ಸೆಂಚುರಿ, ನೂರು… 23 ವರ್ಷಗಳ ಬಳಿಕ ಹಿಸ್ಟರಿ ರಿಪೀಟ್
India vs England Test: ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 471 ರನ್ ಕಲೆಹಾಕಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಶುರು ಮಾಡಿರುವ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್ಗಳು ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.
1 / 5
ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 159 ಎಸೆತಗಳಲ್ಲಿ 16 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 101 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ 227 ಎಸೆತಗಳಲ್ಲಿ 19 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 147 ರನ್ ಸಿಡಿಸಿದರು.
2 / 5
ಹಾಗೆಯೇ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದರು. ಅಲ್ಲದೆ 178 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 134 ರನ್ ಕಲೆಹಾಕಿದರು. ಈ ಮೂಲಕ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿ ಆಲೌಟ್ ಆಗಿದೆ.
3 / 5
ವಿಶೇಷ ಎಂದರೆ ಇಂಗ್ಲೆಂಡ್ನಲ್ಲಿ ನಡೆದ ಟೆಸ್ಟ್ ಪಂದ್ಯದ ಇನಿಂಗ್ಸ್ವೊಂದರಲ್ಲಿ ಭಾರತದ ಮೂವರು ಬ್ಯಾಟರ್ಗಳು ಶತಕ ಸಿಡಿಸಿದ್ದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ. 2002 ರಲ್ಲಿ ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಮೂವರು ದಿಗ್ಗಜರು ಸೆಂಚುರಿ ಸಿಡಿಸಿ ಇತಿಹಾಸ ಬರೆದಿದ್ದರು.
4 / 5
ಇದೀಗ 23 ವರ್ಷಗಳ ಬಳಿಕ ಯಂಗ್ ಇಂಡಿಯಾದ ಯಂಗ್ಸ್ಟರ್ಗಳಾದ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಹಾಗೂ ರಿಷಭ್ ಪಂತ್ ಶತಕ ಸಿಡಿಸುವ ಮೂಲಕ ಇತಿಹಾಸವನ್ನು ಪುನರಾವರ್ತಿಸಿದ್ದಾರೆ. ಅದು ಕೂಡ ಹೆಡಿಂಗ್ಲೆ ಮೈದಾನದಲ್ಲೇ ಎಂಬುದೇ ವಿಶೇಷ. ಅಂದರೆ ಸಚಿನ್, ದ್ರಾವಿಡ್, ಗಂಗೂಲಿ ಜೊತೆಯಾಗಿ ಸೆಂಚುರಿ ಸಿಡಿಸಿದ ಮೈದಾನದಲ್ಲೇ ಇದೀಗ ಗಿಲ್, ಜೈಸ್ವಾಲ್, ಪಂತ್ ಶತಕ ಬಾರಿಸಿ ಹಿಸ್ಟರಿಯನ್ನು ರಿಪೀಟ್ ಮಾಡಿದ್ದಾರೆ.