WTC Points Table: ರಾಜ್‌ಕೋಟ್ ಟೆಸ್ಟ್ ಗೆದ್ದರೆ ಅಂಕಪಟ್ಟಿಯಲ್ಲಿ ಭಾರತಕ್ಕೆ ಭಾರಿ ಲಾಭ..!
WTC Points Table: ಇದೀಗ ರಾಜ್ಕೋಟ್ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.
1 / 7
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೂರನೇ ಆವೃತ್ತಿಯಡಿಯಲ್ಲಿ ಈಗಾಗಲೇ ಹಲವು ದೇಶಗಳು ಟೆಸ್ಟ್ ಸರಣಿಯಲ್ಲಿ ನಿರವಾಗಿವೆ. ಅದರಂತೆ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಹ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಉಭಯ ತಂಡಗಳು ಸಮಬಲ ಸಾಧಿಸಿವೆ.
2 / 7
ಇದೀಗ ರಾಜ್ಕೋಟ್ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯ ಎರಡೂ ತಂಡಗಳಿಗೂ ಮುಖ್ಯವಾಗಿದೆ. ಅದರಲ್ಲೂ ಈ ಪಂದ್ಯ ಇಂಗ್ಲೆಂಡ್ಗಿಂತ ಭಾರತಕ್ಕೆ ಅತಿ ಮುಖ್ಯವಾಗಿದೆ. ಏಕೆಂದರೆ ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.
3 / 7
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ 66.66 ಶೇಕಡಾ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿದೆ. ಉಳಿದಂತೆ ಆಸ್ಟ್ರೇಲಿಯಾ ತಂಡ 55 ಶೇಕಡಾವಾರು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 52.77 ಗೆಲುವಿನ ಶೇಕಡಾವಾರುವಿನೊಂದಿಗೆ ಭಾರತ ತಂಡವು ಮೂರನೇ ಸ್ಥಾನದಲ್ಲಿದೆ.
4 / 7
ಹೀಗಿರುವಾಗ ರಾಜ್‌ಕೋಟ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕುವ ಅವಕಾಶವಿದೆ. ಇದೇ ವೇಳೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.
5 / 7
ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಟೀಮ್ ಇಂಡಿಯಾ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಈ 6 ಪಂದ್ಯಗಳಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದೇ ವೇಳೆ ಒಂದು ಪಂದ್ಯ ಡ್ರಾ ಆಗಿದೆ.
6 / 7
ಸದ್ಯ ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.
7 / 7
ನ್ಯೂಜಿಲೆಂಡ್ ತಂಡ ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 13 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸೋತರೆ ಮತ್ತು ಟೀಂ ಇಂಡಿಯಾ ರಾಜ್‌ಕೋಟ್ ಪಂದ್ಯವನ್ನು ಗೆದ್ದರೆ ಭಾರತವೂ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು.