AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತ, ಮತ್ತೋರ್ವ ವೇಗಿಗೆ ವಿಶ್ರಾಂತಿ

IND vs ENG 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಹೀಗಾಗಿ ಮ್ಯಾಚೆಂಸ್ಟರ್​ನಲ್ಲಿ ಭಾರತ ತಂಡ ಗೆಲ್ಲುವುದು ಅಥವಾ ಡ್ರಾ ಸಾಧಿಸುವುದು ಅನಿವಾರ್ಯ.

ಝಾಹಿರ್ ಯೂಸುಫ್
|

Updated on: Jul 20, 2025 | 1:56 PM

Share
ಮ್ಯಾಚೆಂಸ್ಟರ್​ನ ಓಲ್ಡ್​ ಟ್ರಾಫೋರ್ಡ್​ ಮೈದಾನದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಇದಕ್ಕೂ ಮುನ್ನ ಬುಮ್ರಾ ನಾಲ್ಕನೇ ಪಂದ್ಯದಿಂದ ಹೊರಗುಳಿಯಲಿದ್ದು, ಕೊನೆಯ ಟೆಸ್ಟ್ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಕನ್ಫರ್ಮ್​ ಆಗಿದೆ. ಮೂರನೇ ಟೆಸ್ಟ್ ಪಂದ್ಯದ ಬಳಿಕ ಒಂದು ವಾರ ವಿಶ್ರಾಂತಿ ಲಭಿಸಿರುವ ಕಾರಣ ಬುಮ್ರಾ ಮ್ಯಾಚೆಂಸ್ಟರ್​ನಲ್ಲಿ ನಿರ್ಣಾಯಕ ಪಂದ್ಯವಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದಾಗ್ಯೂ ನಾಲ್ಕನೇ ಪಂದ್ಯದ ವೇಳೆ ಮತ್ತೋರ್ವ ವೇಗಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

2 / 5
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ 10 ವಿಕೆಟ್ ಕಬಳಿಸಿ ಮಿಂಚಿದ್ದ ಆಕಾಶ್ ದೀಪ್ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಏಕೆಂದರೆ ಲಾರ್ಡ್ಸ್​ ಟೆಸ್ಟ್​ನಲ್ಲಿ ಅವರು ಏಕೈಕ ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಆಕಾಶ್ ದೀಪ್​ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇತ್ತ  ಆಕಾಶ್ ದೀಪ್​ ಹೊರಗುಳಿದರೆ, ಅವರ ಬದಲಿಗೆ ಕುಲ್ದೀಪ್ ಯಾದವ್ ಅಥವಾ ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ಕಣಕ್ಕಿಳಿಸಬಹುದು. ಇಲ್ಲ ಗಾಯಾಳು ಅರ್ಷದೀಪ್ ಸಿಂಗ್ ಬದಲಿಗೆ ಆಯ್ಕೆಯಾಗಿರುವ ಅನ್ಶುಲ್ ಕಂಬೋಜ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಬಹುದು. ಈ ಮೂಲಕ ನಾಲ್ಕನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸುವ ಸಾಧ್ಯತೆಯಿದೆ.

4 / 5
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

5 / 5