AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Root: ಸಚಿನ್ ತೆಂಡೂಲ್ಕರ್ ದಾಖಲೆ ಮೇಲೆ ಕಣ್ಣಿಟ್ಟ ಜೋ ರೂಟ್

India vs England Test: ಭಾರತ vs ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಂದ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಅತ್ತ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಹ್ಯಾರಿ ಬ್ರೂಕ್ ಕೂಡ ವೈಯುಕ್ತಿಕ ಕಾರಣಗಳಿಂದಾಗಿ ಈ ಸರಣಿಯಿಂದ ಹಿಂದೆ ಸರಿದಿದ್ದಾರೆ.

TV9 Web
| Edited By: |

Updated on: Jan 24, 2024 | 3:07 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಳೆಯಿಂದ (ಜ.25) ಶುರುವಾಗಲಿದೆ. ಹೈದರಾಬಾದ್​​ನ ರಾಜೀವ್ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ 10 ರನ್ ಬಾರಿಸಿದರೆ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇಂಗ್ಲೆಂಡ್ ವಿರುದ್ಧ 32 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ 7 ಶತಕಗಳೊಂದಿಗೆ 2535 ರನ್ ಕಲೆಹಾಕಿದ್ದಾರೆ.

2 / 5
ಇದೀಗ ಜೋ ರೂಟ್ ಈ ದಾಖಲೆಯನ್ನು ಮುರಿಯುವ ಹೊಸ್ತಿಲಲ್ಲಿದ್ದಾರೆ. ಭಾರತದ ವಿರುದ್ಧ 26 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 9 ಭರ್ಜರಿ ಶತಕಗಳೊಂದಿಗೆ 2526 ರನ್ ಬಾರಿಸಿದ್ದಾರೆ. ಇದೀಗ 27ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿರುವ ರೂಟ್ ಕೇವಲ 10 ರನ್​ಗಳಿಸಿದರೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಬಹುದು.

3 / 5
ಹಾಗೆಯೇ ಈ ಪಂದ್ಯದಲ್ಲಿ ಅರ್ಧಶತಕ ಬಾರಿಸಿದರೆ ಭಾರತದಲ್ಲಿ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ 1000 ರನ್ ಪೂರೈಸಿದ ಹಿರಿಮೆಗೂ ಜೋ ರೂಟ್ ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದಲ್ಲಿ 20 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 2 ಶತಕಗಳೊಂದಿಗೆ ಒಟ್ಟು 952 ರನ್ ಕಲೆಹಾಕಿದ್ದಾರೆ.

4 / 5
ಭಾರತದ ಪಿಚ್​ನಲ್ಲಿ 50.10 ಸರಾಸರಿಯಲ್ಲಿ ರನ್ ಕಲೆಹಾಕಿರುವ ಜೋ ರೂಟ್ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಟ್ರಂಪ್ ಕಾರ್ಡ್​. ಇದರ ಜೊತೆಗೆ ಸ್ಪಿನ್ ಬೌಲಿಂಗ್ ಕೂಡ ಮಾಡಬಲ್ಲರು. ಹೀಗಾಗಿ ಈ ಸರಣಿಯಲ್ಲಿ ಜೋ ರೂಟ್​ಗಾಗಿ ಟೀಮ್ ಇಂಡಿಯಾ ವಿಶೇಷ ರಣತಂತ್ರಗಳನ್ನು ರೂಪಿಸಲಿದೆ. ಈ ರಣತಂತ್ರಗಳಿಗೆ ಜೋ ರೂಟ್ ಪ್ರತಿತಂತ್ರ ರೂಪಿಸಿ ಯಾವೆಲ್ಲಾ ದಾಖಲೆ ಬರೆಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ