- Kannada News Photo gallery Cricket photos IND vs ENG: Jos Buttler completed 12000 runs in T20 cricket
ಸೋಲಿನ ನಡುವೆ ವಿಶ್ವ ದಾಖಲೆ ನಿರ್ಮಿಸಿದ ಜೋಸ್ ಬಟ್ಲರ್
India vs England, 1st T20I: ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 132 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 12.5 ಓವರ್ಗಳಲ್ಲಿ ಈ ಗುರಿಯನ್ನು ಬೆನ್ನತ್ತಿದೆ. ಈ ಸೋಲಿನ ಹೊರತಾಗಿಯೂ ಈ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
Updated on:Jan 23, 2025 | 7:56 AM

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಪರ ಮಿಂಚಿದ್ದು ನಾಯಕ ಜೋಸ್ ಬಟ್ಲರ್ ಮಾತ್ರ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ, ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಟ್ಲರ್ ಸ್ಪೋಟಕ ಇನಿಂಗ್ಸ್ ಆಡಿದರು.

ಒಂದೆಡೆ ಇಂಗ್ಲೆಂಡ್ ದಾಂಡಿಗರು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ ಭಾರತೀಯ ಬೌಲರ್ಗಳ ಮುಂದೆ ಸೆಟೆದು ನಿಂತ ಜೋಸ್ ಬಟ್ಲರ್ ಆಕರ್ಷಕ ಅರ್ಧಶತಕ ಬಾರಿಸಿದರು. ಅಲ್ಲದೆ 44 ಎಸೆತಗಳಲ್ಲಿ 2 ಸಿಕ್ ಹಾಗೂ 8 ಫೋರ್ ಗಳೊಂದಿಗೆ 68 ರನ್ ಕಲೆಹಾಕಿದರು.

ಈ 68 ರನ್ ಗಳೊಂದಿಗೆ ಜೋಸ್ ಬಟ್ಲರ್ ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡಿನ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ದಾಖಲೆ ಬರೆದ ವಿಶ್ವದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಆಂಗ್ಲರ ಪರ ಈ ಸಾಧನೆ ಮಾಡಿದ್ದು ಅಲೆಕ್ಸ್ ಹೇಲ್ಸ್. ಇಂಗ್ಲೆಂಡ್ ಹಾಗೂ ಇನ್ನಿತರೆ ಫ್ರಾಂಚೈಸಿ ಲೀಗ ತಂಡಗಳ ಪರ ಕಣಕ್ಕಿಳಿದಿರುವ ಅಲೆಕ್ಸ್ ಹೇಲ್ಸ್ ಒಟ್ಟು 482 ಇನಿಂಗ್ಸ್ಗಳಲ್ಲಿ 13361 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಪರ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಜೋಸ್ ಬಟ್ಲರ್ ಈ ಸಾಧನೆ ಮಾಡಿದ ಇಂಗ್ಲೆಂಡ್ನ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಬಟ್ಲರ್ ಟಿ20 ಕ್ರಿಕೆಟ್‌ನಲ್ಲಿ ಈವರೆಗೆ 405 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 8 ಶತಕ ಹಾಗೂ 84 ಅರ್ಧಶತಕಗಳೊಂದಿಗೆ ಒಟ್ಟು 12035 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 12 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಇಂಗ್ಲೆಂಡ್ನ 2ನೇ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ.

ಇನ್ನು ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2005 ರಿಂದ 2022 ರವರೆಗೆ ವೆಸ್ಟ್ ಇಂಡೀಸ್ ಸೇರಿದಂತೆ ವಿವಿಧ ತಂಡಗಳ ಪರ ಕಣಕ್ಕಿಳಿದಿರುವ ಕ್ರಿಸ್ ಗೇಲ್ 455 ಇನಿಂಗ್ಸ್ಗಳಿಂದ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
Published On - 7:54 am, Thu, 23 January 25



















