- Kannada News Photo gallery Cricket photos Ind vs eng Kl Rahul and shubman gill break big record of sanjay bangar and rahul dravid in 4th test
IND vs ENG: ದ್ರಾವಿಡ್- ಬಂಗಾರ್ ದಾಖಲೆ ಮುರಿದ ಗಿಲ್- ರಾಹುಲ್ ಜೋಡಿ
Shubman Gill- KL Rahul's Partnership: ಮ್ಯಾಂಚೆಸ್ಟರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲಿನ ಅಂಚಿನಲ್ಲಿತ್ತು. ಆದರೆ ಶುಭ್ಮನ್ ಗಿಲ್ ಮತ್ತು ಕೆಎಲ್ ರಾಹುಲ್ ಅವರ ಅದ್ಭುತ 188 ರನ್‌ಗಳ ಜೊತೆಯಾಟದಿಂದ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಇದು ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಭಾರತೀಯ ಜೋಡಿಯ ದಾಖಲೆಯಾಗಿದೆ. ಗಿಲ್ ಶತಕ ಬಾರಿಸಿದರೆ, ರಾಹುಲ್ 90 ರನ್ ಗಳಿಸಿ ಔಟಾದರು.
Updated on: Jul 27, 2025 | 9:02 PM

ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವುದು ಅಸಾಧ್ಯವಾಗಿರಬಹುದು. ಆದರೆ ಸೋಲಿನಿಂದ ತಪ್ಪಿಸಿಕೊಳ್ಳಲು ಹೋರಾಡುತ್ತಿದೆ. ತಂಡದ ಈ ಹೋರಾಟಕ್ಕೆ ನಾಂದಿ ಹಾಡಿದ ನಾಯಕ ಶುಭ್ಮನ್ ಗಿಲ್ ಹಾಗೂ ಆರಂಭಿಕ ಆಟಗಾರ ಕೆಎಲ್ ರಾಹುಲ್ 188 ರನ್‌ಗಳ ಜೊತೆಯಾಟವನ್ನಾಡಿ ತಂಡವನ್ನು ಸಂಕಷ್ಟದಿಂದ ಹೊರ ತೆಗೆದರು. ಇದರೊಂದಿಗೆ ಹಳೆಯ ದಾಖಲೆಯನ್ನು ಸಹ ಮುರಿದರು.

ಕೊನೆಯ ಇನ್ನಿಂಗ್ಸ್‌ನಲ್ಲಿ ಶುಭ್ಮನ್ ಗಿಲ್ ಮತ್ತು ಕೆಎಲ್ ರಾಹುಲ್ ಜೋಡಿ ಅದ್ಭುತ ಜೊತೆಯಾಟವಾಡಿ ತಂಡವನ್ನು ಬಿಕ್ಕಟ್ಟಿನಿಂದ ಪಾರು ಮಾಡುವುದಲ್ಲದೆ, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿತು. ರಾಹುಲ್ ಮತ್ತು ಗಿಲ್ ಜೊತೆಯಾದಾಗ ಭಾರತ ತಂಡವು ಸೊನ್ನೆಗೆ 2 ವಿಕೆಟ್ ಕಳೆದುಕೊಂಡಿತ್ತು. ಆದರೆ ಇಬ್ಬರೂ ಆಟಗಾರರು ಉತ್ತಮವಾಗಿ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್‌ನಲ್ಲಿ ದೊಡ್ಡ ದಾಖಲೆಯನ್ನು ಮಾಡಿದರು.

ಈ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಮತ್ತು ಕೆಎಲ್ ರಾಹುಲ್ ಜೋಡಿ 421 ಎಸೆತಗಳನ್ನು ಎದುರಿಸಿ 188 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ಮಾಡಿತು. ಇದರೊಂದಿಗೆ, ಈ ಇಬ್ಬರೂ ಆಟಗಾರರು ಇಂಗ್ಲಿಷ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು .

ಈ ಮೊದಲು ಈ ದಾಖಲೆಯು 2002 ರಲ್ಲಿ ಲೀಡ್ಸ್ ಟೆಸ್ಟ್‌ನಲ್ಲಿ 405 ಎಸೆತಗಳನ್ನು ಎದುರಿಸಿದ ರಾಹುಲ್ ದ್ರಾವಿಡ್ ಮತ್ತು ಸಂಜಯ್ ಬಂಗಾರ್ ಅವರ ಹೆಸರಿನಲ್ಲಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಇನ್ನಿಂಗ್ಸ್ ಅಂತರದಿಂದ ಸೋಲಿಸಿತ್ತು. ಆದರೆ ಈ ಪಂದ್ಯದಲ್ಲಿ ಆ ಇತಿಹಾಸವನ್ನು ಪುನರಾವರ್ತಿಸಲು ಸಾಧ್ಯವಾಗಲಿಲ್ಲ.

ಇನ್ನು ವೈಯಕ್ತಿಕವಾಗಿ ನಾಯಕ ಶುಭ್ಮನ್ ಗಿಲ್ ಅದ್ಭುತ ಶತಕ ಬಾರಿಸಿದರೆ ಕೆಎಲ್ ರಾಹುಲ್ ಶತಕದಂಚಿನಲ್ಲಿ ಎಡವಿದರು. ಗಿಲ್ ತಮ್ಮ ಇನ್ನಿಂಗ್ಸ್‌ನಲ್ಲಿ 238 ಎಸೆತಗಳಲ್ಲಿ 12 ಬೌಂಡರಿಗಳ ಸಹಿತ 103 ರನ್ ಗಳಿಸಿದರೆ, ಕೆಎಲ್ ರಾಹುಲ್ 230 ಎಸೆತಗಳಲ್ಲಿ 8 ಬೌಂಡರಿಗಳ ಸಹಿತ 90 ರನ್ ಗಳಿಸಿದರು.




