- Kannada News Photo gallery Cricket photos IND vs ENG KL Rahul ruled out of 3rd Test Devdutt Padikkal named replacement says bcci
IND vs ENG: ಕೆಎಲ್ ರಾಹುಲ್ ಔಟ್, ದೇವದತ್ ಪಡಿಕ್ಕಲ್ ಇನ್..! ಬಿಸಿಸಿಐ ಆಧಿಕೃತ ಮಾಹಿತಿ
IND vs ENG: ಹೈದರಾಬಾದ್ ಟೆಸ್ಟ್ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್ರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಖಚಿತಪಡಿಸಿದೆ.
Updated on:Feb 12, 2024 | 9:00 PM

ಭಾರತ ಹಾಗೂ ಇಂಗ್ಲೆಂಡ್ ನಡುವೆ ರಾಜ್ಕೋಟ್ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ರಾಹುಲ್ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಧೃಡಪಡಿಸಿದೆ.

ರಾಹುಲ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಇಂಜುರಿಯಿಂದಾಗಿ ರಾಹುಲ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದು, ಅವರ ಬದಲಿಯಾಗಿ ದೇವದತ್ ಪಡಿಕ್ಕಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದಿದೆ.

ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಳಗಾಗಿದ್ದ ಕೆಎಲ್ ರಾಹುಲ್, ರಿಹ್ಯಾಬ್ಗಾಗಿ ಬೆಂಗಳೂರಿನ ಎನ್ಸಿಎ ಸೇರಿಕೊಂಡಿದ್ದರು. ಇಷ್ಟು ದಿನ ಎನ್ಸಿಎನಲ್ಲಿ ಚೇತರಿಸಿಕೊಳ್ಳುತ್ತಿದ್ದ ರಾಹುಲ್, ನಿನ್ನೆಯಿಂದ ಅಭ್ಯಾಸವನ್ನೂ ಆರಂಭಿಸಿದ್ದರು.

ಈ ಹಿಂದೆ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟ ಮಾಡಿದ್ದ ಬಿಸಿಸಿಐ, ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರನ್ನು ತಂಡಕ್ಕೆ ಆಯ್ಕೆ ಮಾಡಿತ್ತು. ಆದರೆ ವೈದ್ಯಕೀಯ ತಂಡದಿಂದ ರಾಹುಲ್ ಫಿಟ್ ಎಂಬ ವರದಿ ಬಂದರೆ ಮಾತ್ರ ಅವರನ್ನು ತಂಡದಲ್ಲಿ ಆಡಿಸಲಾಗುವುದು ಎಂದಿತ್ತು.

ಇದೀಗ ರಾಹುಲ್ ಮೂರನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಅಂದರೆ ರಾಹುಲ್ ಇನ್ನು ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂಬರ್ಥವಾಗಿದೆ. ಹೀಗಾಗಿ ರಾಹುಲ್ ಎನ್ಸಿಎನಲ್ಲೇ ಉಳಿಯುವ ಸಾಧ್ಯತೆಗಳಿವೆ. 4ನೇ ಟೆಸ್ಟ್ ವೇಳೆಗೆ ರಾಹುಲ್ ಫಿಟ್ ಆದರೆ ಆಗ ತಂಡವನ್ನು ಕೂಡಿಕೊಳ್ಳಬಹುದಾಗಿದೆ.

ಇನ್ನು ರಾಹುಲ್ ಬದಲಿಯಾಗಿ ಟೀಂ ಇಂಡಿಯಾವನ್ನು ಸೇರಿಕೊಂಡಿರುವ ದೇವದತ್ ಪಡಿಕಲ್ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾದ ಕರೆ ಸ್ವೀಕರಿಸಿರುವ ಪಡಿಕ್ಕಲ್ ಕರ್ನಾಟಕ ತಂಡವನ್ನು ಇಷ್ಟರಲ್ಲೇ ತೊರೆಯಲ್ಲಿದ್ದಾರೆ.

ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಹೊರಗುಳಿಯವುದರೊಂದಿಗೆ ರವೀಂದ್ರ ಜಡೇಜಾ ತಂಡದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ವಾಸ್ತವವಾಗಿ ಜಡೇಜಾ ಕೂಡ ರಾಹುಲ್ರಂತೆ ಇಂಜುರಿಗೆ ತುತ್ತಾಗಿದ್ದರು. ಆದರೀಗ ಚೇತರಿಸಿಕೊಂಡಿರುವ ಜಡೇಜಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವುದನ್ನು ಕಾಣಬಹುದಾಗಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
Published On - 8:44 pm, Mon, 12 February 24









