IND vs ENG: ಕೆಎಲ್ ರಾಹುಲ್ ಅಲಭ್ಯ; ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರಿಗೆ ಅವಕಾಶ?

Updated on: Feb 12, 2024 | 8:31 PM

IND vs ENG: ರಾಹುಲ್ ಬದಲು ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

1 / 7
ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಹೈದರಾಬಾದ್‌ ಟೆಸ್ಟ್​ನಲ್ಲಿ ಇಂಜುರಿಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿರುವ ಕನ್ನಡಿಗ ಕೆಎಲ್ ರಾಹುಲ್, ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಅವರ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್​ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

2 / 7

ವರದಿಯಂತೆ ದೇವದತ್ ಪಡಿಕ್ಕಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಈಗಾಗಲೇ ತಂಡದಲ್ಲಿ ಅವಕಾಶಕ್ಕಾಗಿ ಸಾಕಷ್ಟು ಕ್ರಿಕೆಟಿಗರು ಕಾಯುತ್ತಿದ್ದಾರೆ.

3 / 7

ಅವರುಗಳಲ್ಲಿ ಪ್ರಮುಖರು ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೃವ್ ಜುರೇಲ್. ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿರುವ ಈ ಇಬ್ಬರು ಚೊಚ್ಚಲ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ.

4 / 7

ಸದ್ಯಕ್ಕೆ ಕೇಳಿಬಂದಿರುವ ಮಾಹಿತಿ ಪ್ರಕಾರ ಸತತ ಅವಕಾಶಗಳ ಹೊರತಾಗಿಯೂ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್ ಎರಡಲ್ಲೂ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಕೆಎಸ್ ಭರತ್ ಬದಲಿಗೆ ಧೃವ್ ಜುರೇಲ್​ಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಿವೆ. ಭರತ್ ಬದಲಿಯಾಗಲ್ಲದಿದ್ದರೂ, ರಾಹುಲ್ ಬದಲಿಯಾಗದರೂ ಧೃವ್ ಆಡುವ ಅವಕಾಶ ಪಡೆಯಬಹುದಾಗಿದೆ.

5 / 7

ಭಾರತದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿರುವ ಧೃವ್ ಇದುವರೆಗೆ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 1 ಶತಕ ಸೇರಿದಂತೆ 790 ರನ್ ಸಹ ಗಳಿಸಿದ್ದಾರೆ. ಇದಲ್ಲದೆ ಧೃವ್ 10 ಲಿಸ್ಟ್ ಎ ಪಂದ್ಯಗಳನ್ನೂ ಆಡಿದ್ದಾರೆ.

6 / 7

ರಣಜಿ ಟ್ರೋಫಿಯ ಕಳೆದ ಹಲವು ಸೀಸನ್‌ಗಳಲ್ಲಿ ಸರ್ಫರಾಜ್ ಖಾನ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಉತ್ತಮ ಲಯದಲ್ಲಿದ್ದು, ದೊಡ್ಡ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ರಾಹುಲ್ ಬದಲಿಯಾಗಿ ಸರ್ಫರಾಜ್​ಗೆ ಅವಕಾಶ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.

7 / 7

ಸರ್ಫರಾಜ್ ಇದುವರೆಗೆ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 14 ಶತಕಗಳನ್ನು ಒಳಗೊಂಡಂತೆ 3912 ರನ್ ಗಳಿಸಿದ್ದಾರೆ. ಹಾಗೆಯೇ 37 ಲಿಸ್ಟ್-ಎ ಪಂದ್ಯಗಳಲ್ಲಿ ಸರ್ಫರಾಜ್ 629 ರನ್ ಕಲೆಹಾಕಿದ್ದಾರೆ.

Loading...
Unable to load recommendations.
Follow Us