AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಮೊಹಮ್ಮದ್ ಸಿರಾಜ್

India vs England 4th Test: ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲಿಗಲ್ಲು ಮುಟ್ಟಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ..!

ಝಾಹಿರ್ ಯೂಸುಫ್
|

Updated on: Jul 24, 2025 | 9:03 AM

Share
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ವಿಶೇಷ ಸಾಧನೆ ಮಾಡಿದ್ದಾರೆ. ಅದು ಸಹ ತನ್ನ ಗುರು ವಿರಾಟ್ ಕೊಹ್ಲಿಯ (Virat Kohli) ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. 

1 / 5
ಇಂಗ್ಲೆಂಡ್ ವಿರುದ್ಧದ ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯ ನಾಲ್ಕು ಪಂದ್ಯಗಳಲ್ಲೂ ಕಾಣಿಸಿಕೊಳ್ಳುವ ಮೂಲಕ ಮೊಹಮ್ಮದ್ ಸಿರಾಜ್ ಈ ದಶಕದಲ್ಲಿ ಅತ್ಯಧಿಕ ಟೆಸ್ಟ್ ಮ್ಯಾಚ್​ಗಳನ್ನು ಆಡಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

2 / 5
ವಿರಾಟ್ ಕೊಹ್ಲಿ ಈ ದಶಕದಲ್ಲಿ ಒಟ್ಟು 39 ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಭಾರತದ ಪರ ವಿಶೇಷ ದಾಖಲೆ ನಿರ್ಮಿಸಿದ್ದರು. ಇದೀಗ ಸತತ ಪಂದ್ಯಗಳನ್ನಾಡುವ ಮೂಲಕ ಈ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ವೇಗಿ ಈ ದಶಕದಲ್ಲಿ ಈವರೆಗೆ 40 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

3 / 5
ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯವು ಸಿರಾಜ್ ಅವರ ನೂರನೇ ಅಂತಾರಾಷ್ಟ್ರೀಯ ಪಂದ್ಯ. ಈ ಮೂಲಕ ಭಾರತದ ಪರ 100 ಮ್ಯಾಚ್​ಗಳನ್ನು ಆಡಿದ ಆಟಗಾರರ ಪಟ್ಟಿಗೂ ಮೊಹಮ್ಮದ್ ಸಿರಾಜ್ ಸೇರ್ಪಡೆಯಾಗಿದ್ದಾರೆ.

4 / 5
ಟೀಮ್ ಇಂಡಿಯಾ ಪರ ಈವರೆಗೆ 100 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಮೊಹಮ್ಮದ್ ಸಿರಾಜ್ ಒಟ್ಟು 198 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಪಡೆದರೆ ಭಾರತದ ಪರ 200 ವಿಕೆಟ್​ಗಳನ್ನು ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲೂ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ಮ್ಯಾಂಚೆಸ್ಟರ್​ ಟೆಸ್ಟ್ ಸಿರಾಜ್ ಪಾಲಿಗೆ ಅವಿಸ್ಮರಣೀಯ ಪಂದ್ಯ ಎಂದರೆ ತಪ್ಪಾಗಲಾರದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್

ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು

ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್

ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ

ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ

ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!

ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ

ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ