IND vs ENG: ಕೇನ್ ವಿಲಿಯಮ್ಸನ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಯಶಸ್ವಿ ಜೈಸ್ವಾಲ್..!

Updated on: Feb 17, 2024 | 11:01 PM

IND vs ENG: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿರುವ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 2024 ರಲ್ಲಿ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್​ರನ್ನು ಹಿಂದಿಕ್ಕಿದ್ದಾರೆ.

1 / 7
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿರುವ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 2024 ರಲ್ಲಿ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್​ರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿರುವ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 2024 ರಲ್ಲಿ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್​ರನ್ನು ಹಿಂದಿಕ್ಕಿದ್ದಾರೆ.

2 / 7

ಇಂಗ್ಲೆಂಡ್ ವಿರುದ್ಧ ತಮ್ಮ ಟೆಸ್ಟ್ ವೃತ್ತಿಜೀವನದ ಮೂರನೇ ಶತಕ ದಾಖಲಿಸಿದ ಜೈಸ್ವಾಲ್ 122 ಎಸೆತಗಳಲ್ಲಿ ಅಜೇಯ 104 ರನ್​ಗಳನ್ನು ಕಲೆಹಾಕಿ ಅಜೇಯರಾಗಿ ಉಳಿದಿದ್ದಾರೆ. ಇದರೊಂದಿಗೆ 2024ರಲ್ಲಿ ಜೈಸ್ವಾಲ್ 463 ರನ್ ಕಲೆಹಾಕಿದ್ದಾರೆ.

3 / 7

ಈ ಮೂಲಕ 2024ರಲ್ಲಿ 403 ರನ್ ಸಿಡಿಸಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್​ರನ್ನು ಹಿಂದಿಕ್ಕಿದ್ದಾರೆ. ಈ ವರ್ಷ ಅದ್ಭುತ ಫಾರ್ಮ್​ನಲ್ಲಿರುವ ಕೇನ್, ಕಳೆದ 7 ಇನ್ನಿಂಗ್ಸ್​ಗಳಲ್ಲಿ 7 ಶತಕ ಸಿಡಿಸಿದ್ದಾರೆ.

4 / 7

ಈ ಇಬ್ಬರನ್ನು ಹೊರತುಪಡಿಸಿ ಮೂರನೇ ಸ್ಥಾನದಲ್ಲಿರುವ ರಚಿನ್ ರವೀಂದ್ರ ಈ ವರ್ಷ 301 ರನ್ ಸಿಡಿಸಿದ್ದಾರೆ. ಇತ್ತೀಚಿಗೆ ಮುಗಿದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವೀಂದ್ರ ಭರ್ಜರಿ ದ್ವಿಶತಕ ಬಾರಿಸಿದ್ದರು.

5 / 7

4ನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ವರ್ಷ ಟೆಸ್ಟ್ ಕ್ರಿಕೆಟ್​ನಲ್ಲಿ 295 ರನ್ ಕಲೆಹಾಕಿದ್ದಾರೆ. ಪ್ರಸ್ತುತ ಇಂಗ್ಲೆಂಡ್‌ ವಿರುದ್ಧ ರೋಹಿತ್ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

6 / 7

2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿರುವ ಜೈಸ್ವಾಲ್ ಇದುವರೆಗೆ ಭಾರತದ ಪರ 7 ಟೆಸ್ಟ್ ಪಂದ್ಯಗಳಲ್ಲಿ ಮೂರು ಶತಕಗಳನ್ನು ಒಳಗೊಂಡಂತೆ 751 ರನ್ ಗಳಿಸಿದ್ದಾರೆ. ಹಾಗೆಯೇ 17 ಟಿ20 ಪಂದ್ಯಗಳಲ್ಲಿ 502 ರನ್ ಗಳಿಸಿದ್ದಾರೆ.

7 / 7

ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯುತ್ತಿರುವ ಯಶಸ್ವಿ ಜೈಸ್ವಾಲ್, 2023 ರ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ 625 ರನ್ ಕಲೆಹಾಕಿದ್ದರು. ಹಾಗೆಯೇ 2022 ರ ಐಪಿಎಲ್​ನಲ್ಲಿ 258 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.

Loading...
Unable to load recommendations.
Follow Us