AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪರ ಇಬ್ಬರು ಆಲ್​ರೌಂಡರ್​ಗಳು ಕಣಕ್ಕೆ

England vs India, 2nd Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದೀಗ ದ್ವಿತೀಯ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗುತ್ತಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Jul 01, 2025 | 12:55 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದವು ನಾಳೆಯಿಂದ (ಜುಲೈ 2) ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಕುತೂಹಲ. ಅತ್ತ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಬ್ಬರು ಸ್ಪಿನ್ನರ್​ಗಳಿರಲಿದ್ದಾರೆ ಎಂದು ಟೀಮ್ ಇಂಡಿಯಾ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಸುಳಿವು ನೀಡಿದ್ದಾರೆ.

1 / 5
ಆದರೆ ಆ ಸ್ಪಿನ್ನರ್ ಯಾರು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ, ಟೀಮ್ ಇಂಡಿಯಾ ಪರ ದ್ವಿತೀಯ ಟೆಸ್ಟ್​ನಲ್ಲಿ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಲಿದ್ದಾರೆ. ಸುಂದರ್ ಸ್ಪಿನ್ ಆಲ್​ರೌಂಡರ್. ಹೀಗಾಗಿ ಎಡ್ಜ್​ಬಾಸ್ಟನ್​ನಲ್ಲಿ ಸುಂದರ್ ಹಾಗೂ ಮತ್ತೋರ್ವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

2 / 5
ಇನ್ನು ವಿಶ್ರಾಂತಿಯ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಿಂದ ಜಸ್​ಪ್ರೀತ್ ಬುಮ್ರಾ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಆದರೆ ಅತ್ತ ಎಡ್ಜ್​ಬಾಸ್ಟನ್​ನಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದ ಕುಲ್ದೀಪ್ ಯಾದವ್ ಈ ಪಂದ್ಯದ ವೇಳೆಯೂ ಬೆಂಚ್ ಕಾಯಬೇಕಾಗುತ್ತದೆ. ಏಕೆಂದರೆ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಸ್ಪಿನ್ನರ್​ಗಳಾಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದ ಕುಲ್ದೀಪ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ.

3 / 5
ಇಲ್ಲಿ ಜಸ್​ಪ್ರೀತ್ ಬುಮ್ರಾ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಆದರೆ ನಿತೀಶ್ ಕುಮಾರ್ ರೆಡ್ಡಿ ಅವರ ಆಯ್ಕೆಯಿಂದ ಯಾರು ಹೊರಗುಳಿಯಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ರೆಡ್ಡಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ, ಶಾರ್ದೂಲ್ ಠಾಕೂರ್ ಅಥವಾ ಪ್ರಸಿದ್ಧ್ ಕೃಷ್ಣ ಆಡುವ ಬಳಗದಿಂದ ಹೊರಬೀಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಕರುಣ್ ನಾಯರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

5 / 5
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು