AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

England vs India, 1st Test: ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ತೆಂಡೂಲ್ಕರ್-ಅ್ಯಂಡರ್ಸನ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 465 ರನ್​​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Jun 23, 2025 | 7:24 AM

Share
120 ಎಸೆತಗಳಲ್ಲಿ ಬರೋಬ್ಬರಿ 128 ರನ್​… ಇದು ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಆಟಗಾರ ಪ್ರಸಿದ್ಧ್ ಕೃಷ್ಣ ಕಲೆಹಾಕಿರುವ ರನ್​ಗಳಲ್ಲ. ಬದಲಾಗಿ ನೀಡಿರುವ ರನ್​..! ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಗಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್​ ಕಲೆಹಾಕಿದ ಆಲೌಟ್ ಆಯಿತು.

2 / 6
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ವೇಗಿಗಳಿಂದ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಅದರಲ್ಲೂ ಪ್ರಸಿದ್ಧ್ ಕೃಷ್ಣ ಓವರ್​ಗಳಲ್ಲಿ ಇಂಗ್ಲೆಂಡ್ ದಾಂಡಿಗರು ನಿರಾಯಾಸವಾಗಿ ರನ್ ಕಲೆಹಾಕುತ್ತಿರುವುದು ಕಂಡು ಬಂತು.

3 / 6
ಪರಿಣಾಮ ಪ್ರಸಿದ್ಧ್ ಕೃಷ್ಣ ಕೇವಲ 17 ಓವರ್​​ಗಳಲ್ಲಿ 102 ರನ್​ ಬಿಟ್ಟು ಕೊಟ್ಟರು. ನೂರು ರನ್​ಗಳ ಬಳಿಕ ಕೂಡ ಪ್ರಸಿದ್ಧ್ ಲಯಕ್ಕೆ ಮರಳಲಿಲ್ಲ. ಬದಲಾಗಿ ಮತ್ತಷ್ಟು ದುಬಾರಿಯಾದರು. ಈ ಮೂಲಕ 20 ಓವರ್​​ಗಳಲ್ಲಿ ಬರೋಬ್ಬರಿ 128 ರನ್​ಗಳನ್ನು ನೀಡಿದರು. ಅಂದರೆ ಪ್ರತಿ ಓವರ್​ಗೆ 6.4 ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟರು. ಇದರ ನಡುವೆ ಮೂರು ವಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಮಾಧಾನಕರ.

4 / 6
ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಕೂಡ ರನ್​ ಸೋರಿಕೆ ಮಾಡಿದರು. ಪರಿಣಾಮ ಸಿರಾಜ್ ಎಸೆದ 22 ಓವರ್​​ಗಳಲ್ಲಿ ಇಂಗ್ಲೆಂಡ್ ದಾಂಡಿಗರು 100 ರನ್ ಕಲೆಹಾಕಿದರು. ಇದಾದ ಬಳಿಕ ಲಯಕ್ಕೆ ಮರಳಿದ ಸಿರಾಜ್ 27 ಓವರ್​​ಗಳಲ್ಲಿ 122 ರನ್ ನೀಡಿ 2 ವಿಕೆಟ್ ಕಬಳಿಸಿದರು.

5 / 6
ಇನ್ನೊಂದೆಡೆ ಏಕಾಂಗಿಯಾಗಿ ಇಂಗ್ಲೆಂಡ್ ದಾಂಡಿಗರನ್ನು ಕಾಡಿದ ಜಸ್​ಪ್ರೀತ್ ಬುಮ್ರಾ 24.4 ಕೇವಲ 83 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್​​​ನಲ್ಲಿ 465 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 6 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

6 / 6
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್