ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ 106 ರನ್‌ಗಳಿಂದ ಗೆದ್ದಿದೆ. ಈ ಗೆಲುವಿನಲ್ಲಿ ಟೀಂ ಇಂಡಿಯಾದ ನಾಲ್ವರ ಕೊಡುಗೆ ಅಪಾರವಾಗಿತ್ತು. ಅವರಲ್ಲಿ ಯುವ ಬ್ಯಾಟರ್ಗಳಾದ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಹಾಗೂ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಹಾಗೂ ಆಫ್ ಸ್ಪಿನ್ನರ್ ಆರ್. ಅಶ್ವಿನ್ ಸೇರಿದ್ದಾರೆ.
ಬ್ಯಾಟಿಂಗ್ನಲ್ಲಿ ಜೈಸ್ವಾಲ್ ದ್ವಿಶತಕ, ಗಿಲ್ ಶತಕ ಸಿಡಿಸಿದರೆ, ಬೌಲಿಂಗ್ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಹಾಗೂ ಅಶ್ವಿನ್ ಕ್ರಮವಾಗಿ 9 ಮತ್ತು 3 ವಿಕೆಟ್ ಪಡೆದರು. ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಬಲಿಷ್ಠ ಬೌಲಿಂಗ್ ಮಾಡಿದ ಅಶ್ವಿನ್ ಇಂಗ್ಲೆಂಡ್ ವಿರುದ್ಧ ದೊಡ್ಡ ದಾಖಲೆ ಕೂಡ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಮೂರು ವಿಕೆಟ್‌ಗಳನ್ನು ಕಬಳಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
ಪ್ರಸ್ತುತ ಇಂಗ್ಲೆಂಡ್ ವಿರುದ್ಧ 97 ವಿಕೆಟ್ ಪಡೆದಿರುವ ಅಶ್ವಿನ್, ಭಾಗವತ್ ಚಂದ್ರಶೇಖರ್ ಅವರ ದಾಖಲೆ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಚಂದ್ರಶೇಖರ್ ತಮ್ಮ ಹೆಸರಿನಲ್ಲಿ 95 ವಿಕೆಟ್ ಪಡೆದಿದ್ದಾರೆ. ಇದೀಗ ಅಶ್ವಿನ್ ಭಾಗವತ್ ಅವರು ಚಂದ್ರಶೇಖರ್ ಅವರನ್ನು ಹಿಂದಿಕ್ಕಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ವಿಕೆಟ್ ಕಬಳಿಸಿ ಮೊದಲ ಸ್ಥಾನಕ್ಕೆ ತಲುಪಿದ್ದಾರೆ.
ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ 21 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇದರಲ್ಲಿ ಒಟ್ಟು 97 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 55 ರನ್‌ಗಳಿಗೆ 6 ವಿಕೆಟ್ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದಲ್ಲದೆ ಅಶ್ವಿನ್ ಇಂಗ್ಲೆಂಡ್ ವಿರುದ್ಧ 6 ಬಾರಿ 5 ವಿಕೆಟ್ ಪಡೆದಿದ್ದಾರೆ.
ಹಾಗೆಯೇ ಇಂಗ್ಲೆಂಡ್ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಶ್ವಿನ್ ಇದುವರೆಗೆ 133 ವಿಕೆಟ್‌ಗಳನ್ನು ಪಡೆದಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಕನ್ನಡಿಗೆ ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 117 ವಿಕೆಟ್ ಪಡೆದಿದ್ದಾರೆ.
ಅಶ್ವಿನ್ ಇದುವರೆಗೆ ಭಾರತ ಪರ ಟೆಸ್ಟ್ ಪಂದ್ಯಗಳಲ್ಲಿ 499 ವಿಕೆಟ್ ಪಡೆದಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧ ಇನ್ನೂ ಒಂದು ವಿಕೆಟ್ ಪಡೆದಿದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳನ್ನು ಪೂರೈಸಿದ ದಾಖಲೆ ನಿರ್ಮಿಸುತ್ತಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಸರಣಿಯಲ್ಲಿ ಇನ್ನೂ ಮೂರು ಟೆಸ್ಟ್ ಪಂದ್ಯಗಳು ಬಾಕಿ ಇದ್ದು, ಅಶ್ವಿನ್ಗೆ ದಾಖಲೆ ನಿರ್ಮಿಸುವ ಸುವರ್ಣಾವಕಾಶವಿದೆ.