
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ನೀಡಿರುವ 231 ರನ್ಗಳ ಗುರಿ ಬೆನ್ನಟ್ಟಿರುವ ಭಾರತ ಪ್ರಮುಖ ಆಟಗಾರರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಭಾರತದ ಇನ್ನಿಂಗ್ಸ್ಗೆ ಆಲ್‌ರೌಂಡರ್ ಅಶ್ವಿನ್ ಹಾಗೂ ಕೆಎಸ್ ಭರತ್ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪಾಳಯದ 3 ವಿಕೆಟ್ ಕಬಳಿಸಿದ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತದ ಬೌಲರ್ಗಳ ಪೈಕಿ ಇದೀಗ ಕನ್ನಡಿಗ ಅನಿಲ್ ಕುಂಬ್ಳೆಯವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ವಿರುದ್ಧ ಅಶ್ವಿನ್, ಮೊದಲ ಇನಿಂಗ್ಸ್‌ನಲ್ಲಿ ಮೂರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು ಒಟ್ಟು 6 ವಿಕೆಟ್ ಕಬಳಿಸಿದರು. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ಅಶ್ವಿನ್ ಇದುವರೆಗೆ ಇಂಗ್ಲೆಂಡ್ ವಿರುದ್ಧ 94 ಟೆಸ್ಟ್ ವಿಕೆಟ್ ಪಡೆದಿದ್ದು, ಈ ವಿಚಾರದಲ್ಲಿ 92 ವಿಕೆಟ್ ಉರುಳಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ. ಪ್ರಸ್ತುತ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾಗವತ್ ಚಂದ್ರಶೇಖರ್ 95 ವಿಕೆಟ್ ಪಡೆದಿದ್ದಾರೆ.

2011ರಲ್ಲಿ ಭಾರತದ ಪರ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಅಶ್ವಿನ್, ಅಂದಿನಿಂದ ಭಾರತೀಯ ಸ್ಪಿನ್ ಬೌಲಿಂಗ್‌ನಲ್ಲಿ ಪ್ರಮುಖ ಕೊಂಡಿಯಾಗಿ ಉಳಿದಿದ್ದಾರೆ. ಟೀಂ ಇಂಡಿಯಾ ಪರ 95 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು ಇದುವರೆಗೆ 490 ವಿಕೆಟ್ ಪಡೆದಿದ್ದಾರೆ.

ಇದಲ್ಲದೆ ಏಕದಿನ ಪಂದ್ಯಗಳಲ್ಲಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿರುವ ಅಶ್ವಿನ್ ಇದುವರೆಗೆ 156 ವಿಕೆಟ್ ಹಾಗೂ ಟಿ20 ಪಂದ್ಯಗಳಲ್ಲಿ 72 ವಿಕೆಟ್ಗಳನ್ನು ಪಡೆದಿದ್ದಾರೆ.