- Kannada News Photo gallery Cricket photos IND vs ENG r ashwin dismissed ben stokes 12th time in test cricket
IND vs ENG: ದಾಖಲೆಯ 12ನೇ ಬಾರಿಗೆ ಅಶ್ವಿನ್ಗೆ ಬಲಿಯಾದ ಆಂಗ್ಲ ನಾಯಕ ಬೆನ್ ಸ್ಟೋಕ್ಸ್..!
IND vs ENG: ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್‌ರನ್ನು ಕ್ಲೀನ್ ಬೌಲ್ಡ್ ಮಾಡಿದ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
Updated on: Jan 27, 2024 | 5:46 PM

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್‌ರನ್ನು ಕ್ಲೀನ್ ಬೌಲ್ಡ್ ಮಾಡಿದ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಹೈದರಾಬಾದ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ತಮ್ಮ ಅದ್ಭುತ ಬೌಲಿಂಗ್ ಮೂಲಕ ಸ್ಟೋಕ್ಸ್‌ರನ್ನು ಔಟ್ ಮಾಡಿದರು. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇನ್ನಿಂಗ್ಸ್‌ನಲ್ಲಿ 12 ನೇ ಬಾರಿಗೆ ಸ್ಟೋಕ್ಸ್ ಅವರನ್ನು ಔಟ್ ಮಾಡಿದ ಸಾಧನೆ ಮಾಡಿದರು.

ಇದರೊಂದಿಗೆ ಸ್ಟೋಕ್ಸ್, ಅಶ್ವಿನ್ಗೆ ಅತಿ ಹೆಚ್ಚು ಬಾರಿ ಔಟಾದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಸ್ಟೋಕ್ಸ್ಗೂ ಮೊದಲು ಅಶ್ವಿನ್ ಬೌಲಿಂಗ್ನಲ್ಲಿ 11 ಬಾರಿ ವಿಕೆಟ್ ಒಪ್ಪಿಸಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು.

ಈ ಇಬ್ಬರ ನಂತರ ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ 9 ಬಾರಿ ಅಶ್ವಿನ್ಗೆ ಬಲಿಯಾಗಿದ್ದರೆ, 4ನೇ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ 8 ಬಾರಿ ಅಶ್ವಿನ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿದ್ದಾರೆ.

ಹೈದರಾಬಾದ್ ಟೆಸ್ಟ್‌ಗೂ ಮುನ್ನ ರವಿಚಂದ್ರನ್ ಅಶ್ವಿನ್ 490 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದರು. ಆ ಬಳಿಕ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದಿದ್ದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಟೋಕ್ಸ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ 495 ನೇ ಟೆಸ್ಟ್ ವಿಕೆಟ್ ಪೂರೈಸಿದ್ದಾರೆ.

ಇನ್ನು ಅಶ್ವಿನ್ ಆಂಗ್ಲರ ವಿರುದ್ಧದ ಸರಣಿಯಲ್ಲಿ ಐದು ವಿಕೆಟ್ ಪಡೆದರೆ, ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಲಿದ್ದಾರೆ. ಅಶ್ವಿನ್ ಈ ಸಾಧನೆ ಮಾಡಿದರೆ, ಅನಿಲ್ ಕುಂಬ್ಳೆ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.




