IND vs ENG: ದಾಖಲೆಯ 12ನೇ ಬಾರಿಗೆ ಅಶ್ವಿನ್​ಗೆ ಬಲಿಯಾದ ಆಂಗ್ಲ ನಾಯಕ ಬೆನ್ ಸ್ಟೋಕ್ಸ್‌..!

|

Updated on: Jan 27, 2024 | 5:46 PM

IND vs ENG: ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್‌ ತಂಡದ ನಾಯಕ ಬೆನ್ ಸ್ಟೋಕ್ಸ್‌ರನ್ನು ಕ್ಲೀನ್ ಬೌಲ್ಡ್ ಮಾಡಿದ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್‌ ತಂಡದ ನಾಯಕ ಬೆನ್ ಸ್ಟೋಕ್ಸ್‌ರನ್ನು ಕ್ಲೀನ್ ಬೌಲ್ಡ್ ಮಾಡಿದ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೇಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

2 / 6
ಹೈದರಾಬಾದ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ತಮ್ಮ ಅದ್ಭುತ ಬೌಲಿಂಗ್ ಮೂಲಕ ಸ್ಟೋಕ್ಸ್‌ರನ್ನು ಔಟ್ ಮಾಡಿದರು. ಈ ಮೂಲಕ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇನ್ನಿಂಗ್ಸ್‌ನಲ್ಲಿ 12 ನೇ ಬಾರಿಗೆ ಸ್ಟೋಕ್ಸ್ ಅವರನ್ನು ಔಟ್ ಮಾಡಿದ ಸಾಧನೆ ಮಾಡಿದರು.

3 / 6
ಇದರೊಂದಿಗೆ ಸ್ಟೋಕ್ಸ್, ಅಶ್ವಿನ್​ಗೆ ಅತಿ ಹೆಚ್ಚು ಬಾರಿ ಔಟಾದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಸ್ಟೋಕ್ಸ್​ಗೂ ಮೊದಲು ಅಶ್ವಿನ್​ ಬೌಲಿಂಗ್​ನಲ್ಲಿ 11 ಬಾರಿ ವಿಕೆಟ್ ಒಪ್ಪಿಸಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು.

4 / 6
ಈ ಇಬ್ಬರ ನಂತರ ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ 9 ಬಾರಿ ಅಶ್ವಿನ್​ಗೆ ಬಲಿಯಾಗಿದ್ದರೆ, 4ನೇ ಸ್ಥಾನದಲ್ಲಿರುವ ಸ್ಟೀವ್ ಸ್ಮಿತ್ 8 ಬಾರಿ ಅಶ್ವಿನ್​ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದ್ದಾರೆ.

5 / 6
ಹೈದರಾಬಾದ್ ಟೆಸ್ಟ್‌ಗೂ ಮುನ್ನ ರವಿಚಂದ್ರನ್ ಅಶ್ವಿನ್ 490 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದರು. ಆ ಬಳಿಕ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದಿದ್ದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಟೋಕ್ಸ್ ಅವರನ್ನು ಔಟ್ ಮಾಡುವ ಮೂಲಕ ತಮ್ಮ 495 ನೇ ಟೆಸ್ಟ್ ವಿಕೆಟ್ ಪೂರೈಸಿದ್ದಾರೆ.

6 / 6
ಇನ್ನು ಅಶ್ವಿನ್ ಆಂಗ್ಲರ ವಿರುದ್ಧದ ಸರಣಿಯಲ್ಲಿ ಐದು ವಿಕೆಟ್ ಪಡೆದರೆ, ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್ ಪೂರೈಸಲಿದ್ದಾರೆ. ಅಶ್ವಿನ್ ಈ ಸಾಧನೆ ಮಾಡಿದರೆ, ಅನಿಲ್ ಕುಂಬ್ಳೆ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ.