AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂತ್ ಪರಾಕ್ರಮಕ್ಕೆ ಆಸ್ಟ್ರೇಲಿಯನ್ನರ ದಾಖಲೆಗಳೇ ಉಡೀಸ್

India vs England: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 471 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿರುವ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 209 ರನ್​ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Jun 22, 2025 | 10:31 AM

Share
ಹೆಡಿಂಗ್ಲೆ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishabh Pant) ಇಂಗ್ಲೆಂಡ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಆಸ್ಟ್ರೇಲಿಯನ್ ಲೆಜೆಂಡ್​ ಆ್ಯಡಂ ಗಿಲ್​ಕ್ರಿಸ್ಟ್​ ಹಾಗೂ ಬ್ರಾಡ್ ಹಾಡಿನ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಲೀಡ್ಸ್​ನಲ್ಲಿ ನಡೆದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಪಂತ್ 178 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 134 ರನ್ ಬಾರಿಸಿದರು. ಈ ಶತಕದೊಂದಿಗೆ ಪಂತ್ ಇಂಗ್ಲೆಂಡ್​ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದ್ದಾರೆ.

2 / 5
ಅಂದರೆ ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿದೇಶಿ ವಿಕೆಟ್ ಕೀಪರ್ ಬ್ಯಾಟರ್​ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆ್ಯಡಂ ಗಿಲ್​ಕ್ರಿಸ್ಟ್ ಹಾಗೂ ಬ್ರಾಡ್ ಹಾಡಿನ್ ಅಗ್ರಸ್ಥಾನದಲ್ಲಿದ್ದರು. ಈ ಇಬ್ಬರು ಆಸೀಸ್ ದಾಂಡಿಗರು ಆಂಗ್ಲರ ವಿರುದ್ಧ ತಲಾ 3 ಟೆಸ್ಟ್ ಶತಕ ಸಿಡಿಸಿ ದಾಖಲೆ ಬರೆದಿದ್ದರು.

3 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಪಂಟರ್ ಪಂತ್ ಈವರೆಗೆ 7 ಟೆಸ್ಟ್ ಶತಕ ಸಿಡಿಸಿದ್ದಾರೆ. ಈ ಏಳರಲ್ಲಿ 4 ಶತಕಗಳು ಮೂಡಿಬಂದಿರುವುದು ಇಂಗ್ಲೆಂಡ್​ ವಿರುದ್ಧ ಎಂಬುದು ವಿಶೇಷ. 2018 ರಲ್ಲಿ ಲಂಡನ್​ನ ಓವಲ್ ಮೈದಾನದಲ್ಲಿ ಚೊಚ್ಚಲ ಸೆಂಚುರಿ ಸಿಡಿಸಿದ್ದ ಪಂತ್, ಆ ಬಳಿಕ 2022 ರಲ್ಲಿ ಎಡ್ಜ್​ಬಾಸ್ಟನ್​ನಲ್ಲಿ ಶತಕ ಬಾರಿಸಿದ್ದರು.

4 / 5
ಈ ಎರಡು ಶತಕಗಳ ಬಳಿಕ ರಿಷಭ್ ಪಂತ್ ಅಹಮದಾಬಾದ್​ನಲ್ಲಿ ಆಂಗ್ಲರ ವಿರುದ್ಧ 101 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್​ನಲ್ಲೇ ಮೂರನೇ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಕ್ರಿಕೆಟ್ ಜನಕರ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ವಿಕೆಟ್ ಕೀಪರ್ ಬ್ಯಾಟರ್​ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ

ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ

ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?