- Kannada News Photo gallery Cricket photos IND vs ENG: Rishabh Pant Equals Andy Flower's World Record
RCB ಕೋಚ್ನ ವಿಶ್ವ ದಾಖಲೆ ಸರಿಗಟ್ಟಿದ ರಿಷಭ್ ಪಂತ್
India vs England 1st Test: ಲೀಡ್ಸ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 471 ರನ್ ಕಲೆಹಾಕಿದರೆ, ಇಂಗ್ಲೆಂಡ್ ತಂಡವು 465 ರನ್ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ತಂಡವು 364 ರನ್ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್ನಲ್ಲಿನ 6 ರನ್ಗಳ ಹಿನ್ನಡೆಯೊಂದಿಗೆ ಇಂಗ್ಲೆಂಡ್ 371 ರನ್ಗಳ ಗುರಿ ಪಡೆದುಕೊಂಡಿದೆ.
Updated on: Jun 24, 2025 | 9:03 AM

India vs England 1st Test: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಗಳೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರ ಎರಡು ಇನಿಂಗ್ಸ್ ಗಳಲ್ಲಿ ಶತಕ ಸಿಡಿಸಿರುವುದು ಕೇವಲ ಇಬ್ಬರು ವಿಕೆಟ್ ಕೀಪರ್ ಗಳು ಮಾತ್ರ. ಈ ಪಟ್ಟಿಯಲ್ಲಿರುವ ಮೊದಲಿಗರು ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೋಚ್ ಆ್ಯಂಡಿ ಫ್ಲವರ್.

2001 ರಲ್ಲಿ ಹರಾರೆಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್ ಗಳಲ್ಲಿ ಆ್ಯಂಡಿ ಫ್ಲವರ್ ಶತಕ ಸಿಡಿಸಿದ್ದರು. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಬರೋಬ್ಬರಿ 24 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 134 ರನ್ ಬಾರಿಸಿದ್ದ ಪಂತ್, ದ್ವಿತೀಯ ಇನಿಂಗ್ಸ್ ನಲ್ಲಿ 118 ರನ್ ಕಲೆಹಾಕಿದ್ದಾರೆ.

ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾಗೂ ಭಾರತದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಬಾರಿಸಿದ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 364 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿನ 6 ರನ್ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡಕ್ಕೆ ದ್ವಿತೀಯ ಇನಿಂಗ್ಸ್ನಲ್ಲಿ 371 ರನ್ಗಳ ಗುರಿ ನೀಡಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
