AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಕೋಚ್​ನ ವಿಶ್ವ ದಾಖಲೆ ಸರಿಗಟ್ಟಿದ ರಿಷಭ್ ಪಂತ್

India vs England 1st Test: ಲೀಡ್ಸ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ ತಂಡವು 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 364 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ 6 ರನ್​ಗಳ ಹಿನ್ನಡೆಯೊಂದಿಗೆ ಇಂಗ್ಲೆಂಡ್ 371 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jun 24, 2025 | 9:03 AM

Share
India vs England 1st Test: ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಗಳೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

1 / 6
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಪಂದ್ಯವೊಂದರ ಎರಡು ಇನಿಂಗ್ಸ್ ಗಳಲ್ಲಿ ಶತಕ ಸಿಡಿಸಿರುವುದು ಕೇವಲ ಇಬ್ಬರು ವಿಕೆಟ್ ಕೀಪರ್ ಗಳು ಮಾತ್ರ. ಈ ಪಟ್ಟಿಯಲ್ಲಿರುವ ಮೊದಲಿಗರು ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೋಚ್ ಆ್ಯಂಡಿ ಫ್ಲವರ್.

2 / 6
2001 ರಲ್ಲಿ ಹರಾರೆಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್ ಗಳಲ್ಲಿ ಆ್ಯಂಡಿ ಫ್ಲವರ್ ಶತಕ ಸಿಡಿಸಿದ್ದರು. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಮೊದಲ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದರು.

3 / 6
ಇದೀಗ ಬರೋಬ್ಬರಿ 24 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ರಿಷಭ್ ಪಂತ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 134 ರನ್ ಬಾರಿಸಿದ್ದ ಪಂತ್, ದ್ವಿತೀಯ ಇನಿಂಗ್ಸ್ ನಲ್ಲಿ 118 ರನ್ ಕಲೆಹಾಕಿದ್ದಾರೆ.

4 / 6
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಹಾಗೂ ಭಾರತದ ಮೊದಲ ವಿಕೆಟ್ ಕೀಪರ್​ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಬಾರಿಸಿದ ಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 364 ರನ್​ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿನ 6 ರನ್​ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 371 ರನ್​ಗಳ ಗುರಿ ನೀಡಿದೆ.

6 / 6