AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ‘ದಾದಾ’ ದಾಖಲೆ ಮುರಿದ ಹಿಟ್‌ಮ್ಯಾನ್..!

IND vs ENG: ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 24 ರನ್​ಗಳ ಅಲ್ಪ ಇನ್ನಿಂಗ್ಸ್ ಆಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಮಾಜಿ ನಾಯಕ ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Jan 26, 2024 | 8:06 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 24 ರನ್​ಗಳ ಅಲ್ಪ ಇನ್ನಿಂಗ್ಸ್ ಆಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಮಾಜಿ ನಾಯಕ ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

1 / 6
ರೋಹಿತ್ ಶರ್ಮಾ ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿ ಮೂರು ಬೌಂಡರಿಗಳ ಸಹಾಯದಿಂದ 24 ರನ್‌ಗಳ ಇನಿಂಗ್ಸ್‌ ಆಡಿದರು. ಇದರೊಂದಿಗೆ ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

2 / 6
ಈ ಇನ್ನಿಂಗ್ಸ್​ಗೂ ಮೊದಲು ಐದನೇ ಸ್ಥಾನದಲ್ಲಿದ್ದ ರೋಹಿತ್, ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ಬ್ಯಾಟರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿದ್ದಾರೆ.

3 / 6
ಸೌರವ್ ಗಂಗೂಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 421 ಪಂದ್ಯಗಳನ್ನಾಡಿದ್ದು, ಅದರಲ್ಲಿ 18433 ರನ್ ಕಲೆಹಾಕಿದ್ದರು.

4 / 6
ಪ್ರಸ್ತುತ ರೋಹಿತ್ ಶರ್ಮಾ 468 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 490 ಇನ್ನಿಂಗ್ಸ್‌ಗಳಲ್ಲಿ 18444 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 14 ರನ್ ಗಳಿಸಿದ ಕೂಡಲೇ ಗಂಗೂಲಿ ಅವರನ್ನು ಹಿಂದಿಕ್ಕಿದರು.

5 / 6
ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಮೇಲುಗೈ ಸಾಧಿಸಿದೆ. ಎರಡನೇ ದಿನದಾಟದಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 421 ರನ್ ಕಲೆಹಾಕಿದೆ. ಇದರೊಂದಿಗೆ ಮೊದಲ ಇನ್ನಿಂಗ್ಸ್​ನಲ್ಲಿ 175 ರನ್​ಗಳ ಮುನ್ನಡೆ ಸಾಧಿಸಿದೆ.

6 / 6