Rohit Sharma: ಭರ್ಜರಿ ಸೆಂಚುರಿ ಸಿಡಿಸಿದ ರೋಹಿತ್ ಶರ್ಮಾ
TV9 Web | Updated By: ಝಾಹಿರ್ ಯೂಸುಫ್
Updated on:
Feb 15, 2024 | 2:46 PM
India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 4ನೇ ವಿಕೆಟ್ಗೆ ಜೊತೆಗೂಡಿದ ಈ ಜೋಡಿ ಶತಕದ ಜೊತೆಯಾಟದೊಂದಿಗೆ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.
1 / 7
ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದರು.
2 / 7
ಆದರೆ ನಿರೀಕ್ಷಿತ ಆರಂಭ ಪಡೆಯುವಲ್ಲಿ ಟೀಮ್ ಇಂಡಿಯಾ ವಿಫಲವಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (10) ಬೇಗನೆ ಔಟಾದರೆ, ಶುಭ್ಮನ್ ಗಿಲ್ (0) ಶೂನ್ಯದೊಂದಿಗೆ ಮರಳಿದ್ದರು. ರಜತ್ ಪಾಟಿದಾರ್ ಕಲೆಹಾಕಿದ್ದು ಕೇವಲ 5 ರನ್ಗಳು ಮಾತ್ರ. ಇದಾಗ್ಯೂ ಒಂದೆಡೆ ರೋಹಿತ್ ಶರ್ಮಾ ಕ್ರೀಸ್ ಕಚ್ಚಿ ನಿಂತಿದ್ದರು.
3 / 7
ರವೀಂದ್ರ ಜೊತೆಗೂಡಿ 4ನೇ ವಿಕೆಟ್ಗೆ 150* ರನ್ಗಳ ಜೊತೆಯಾಟವಾಡಿದ ರೋಹಿತ್ ಶರ್ಮಾ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅಲ್ಲದೆ 157 ಎಸೆತಗಳಲ್ಲಿ 11 ಫೋರ್ ಹಾಗೂ 2 ಭರ್ಜರಿ ಸಿಕ್ಸರ್ನೊಂದಿಗೆ ಆಕರ್ಷಕ ಶತಕ ಪೂರೈಸಿದರು.
4 / 7
ಇದು ರೋಹಿತ್ ಶರ್ಮಾ ಅವರ 11ನೇ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ ಇದುವರೆಗೆ 97 ಟೆಸ್ಟ್ ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ 1 ದ್ವಿಶತಕ, ಹತ್ತು ಶತಕ ಹಾಗೂ 17 ಅರ್ಧಶತಕಗಳೊಂದಿಗೆ 3925 ರನ್ಗಳನ್ನು ಕಲೆಹಾಕಿದ್ದಾರೆ.
5 / 7
ರೋಹಿತ್ ಶರ್ಮಾ (102) ಅವರ ಈ ಭರ್ಜರಿ ಶತಕ ಹಾಗೂ ರವೀಂದ್ರ ಜಡೇಜಾ (68) ಅವರ ಅರ್ಧಶತಕದ ನೆರವಿನಿಂದ ಇದೀಗ ಟೀಮ್ ಇಂಡಿಯಾ ಉತ್ತಮ ಸ್ಥಿತಿಯಲ್ಲಿದ್ದು, 53 ಓವರ್ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿ ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ ದಾಪುಗಾಲಿಟ್ಟಿದೆ.
6 / 7
ಇನ್ನು ಈ ಶತಕದೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಸೌರವ್ ಗಂಗೂಲಿ ನಾಲ್ಕನೇ ಸ್ಥಾನದಲ್ಲಿದ್ದರು. ಟೀಮ್ ಇಂಡಿಯಾ ಪರ 485 ಇನಿಂಗ್ಸ್ ಆಡಿರುವ ಸೌರವ್ ಗಂಗೂಲಿ ಒಟ್ಟು 18433 ರನ್ ಪೇರಿಸಿ ಈ ಸಾಧನೆ ಮಾಡಿದ್ದರು.
7 / 7
ಇದೀಗ 494ನೇ ಇನಿಂಗ್ಸ್ ಮೂಲಕ ರೋಹಿತ್ ಶರ್ಮಾ 18587+ ರನ್ ಕಲೆಹಾಕಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತದ 4ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
Published On - 2:34 pm, Thu, 15 February 24