IND vs ENG: ಕಳೆದ 11 ಇನ್ನಿಂಗ್ಸ್​ಗಳಲ್ಲಿ ಫ್ಲಾಪ್ ಶೋ; ಅಯ್ಯರ್ ಬದಲು ಸರ್ಫರಾಜ್​ಗೆ ಸಿಗುತ್ತಾ ಅವಕಾಶ?

IND vs ENG: ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅಯ್ಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ರನ್​ ಗಳಿಸಲುವ ಸಾಕಷ್ಟು ಕಷ್ಟಪಡುತ್ತಿರುವುದು ಕಂಡುಬಂದಿದೆ. ಕಳೆದ 11 ಇನ್ನಿಂಗ್ಸ್‌ಗಳಲ್ಲಿ ಅವರು ಒಂದೇ ಒಂದು ಅರ್ಧಶತಕ ಕೂಡ ಗಳಿಸಿಲ್ಲ. ಇದರಲ್ಲಿ ಎರಡು ಬಾರಿ ಅಯ್ಯರ್​ಗೆ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on: Feb 04, 2024 | 4:43 PM

ಇಂಗ್ಲೆಂಡ್ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಶ್ರೇಯಸ್ ಅಯ್ಯರ್ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ತಮ್ಮ ಕೊನೆಯ 11 ಇನ್ನಿಂಗ್ಸ್‌ಗಳಲ್ಲಿ ಒಂದೇ ಒಂದು ಅರ್ಧಶತಕವನ್ನು ಸಿಡಿಸದ ಅಯ್ಯರ್​ಗೆ ಭಾರತ ಟೆಸ್ಟ್ ತಂಡದಿಂದ ಗೇಟ್​ಪಾಸ್ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ.

1 / 8
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲೂ ಅಯ್ಯರ್ ಅವರು  ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಇದಾದ ಬಳಿಕ ಟೀಮ್ ಮ್ಯಾನೇಜ್‌ಮೆಂಟ್ ಅವರು ದೇಶೀಯ ಕ್ರಿಕೆಟ್ ಆಡುವಂತೆ ಸಲಹೆ ನೀಡಿತ್ತು.

2 / 8
ಇದರೊಂದಿಗೆ ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ತಂತ್ರದ ಬಗ್ಗೆಯೂ ಹಲವು ಬಾರಿ ಪ್ರಶ್ನೆಗಳು ಎದ್ದಿವೆ. ಅದರ ಹೊರತಾಗಿಯೂ ಟೀಮ್ ಮ್ಯಾನೇಜ್​ಮೆಂಟ್ ಅವರಿಗೆ ಮತ್ತೆ ಮತ್ತೆ ತಂಡದಲ್ಲಿ ಅವಕಾಶ ನೀಡುತ್ತಿದೆ. ಇಂಗ್ಲೆಂಡ್ ವಿರುದ್ಧವೂ, ಅಯ್ಯರ್ ಎರಡೂ ಟೆಸ್ಟ್‌ಗಳಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅಭಿಮಾನಿಗಳು ಮೂರನೇ ಟೆಸ್ಟ್‌ನಲ್ಲಿ ಸರ್ಫರಾಜ್ ಖಾನ್‌ಗೆ ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

3 / 8
ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅಯ್ಯರ್ ಟೆಸ್ಟ್ ಕ್ರಿಕೆಟ್‌ನಲ್ಲಿ ರನ್​ ಗಳಿಸಲುವ ಸಾಕಷ್ಟು ಕಷ್ಟಪಡುತ್ತಿರುವುದು ಕಂಡುಬಂದಿದೆ. ಕಳೆದ 11 ಇನ್ನಿಂಗ್ಸ್‌ಗಳಲ್ಲಿ ಅವರು ಒಂದೇ ಒಂದು ಅರ್ಧಶತಕ ಕೂಡ ಗಳಿಸಿಲ್ಲ. ಇದರಲ್ಲಿ ಎರಡು ಬಾರಿ ಅಯ್ಯರ್​ಗೆ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ.

4 / 8
ಅಯ್ಯರ್ ಅವರ ಕೊನೆಯ 11 ಇನ್ನಿಂಗ್ಸ್‌ಗಳನ್ನು ಗಮನಿಸಿದರೆ, ಅವರು ಕೇವಲ 4,12,0, 26, 31, 6, 0, 4*, 35, 13, 27 ಮತ್ತು 29 ರನ್ ಗಳಿಸಿದ್ದಾರೆ. ಇದಾದ ನಂತರ ಮೂರನೇ ಟೆಸ್ಟ್‌ನಲ್ಲೂ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅದೇ ಸಮಯದಲ್ಲಿ, ಅಯ್ಯರ್ ಬದಲಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ನೀಡಬೇಕೆಂದು ಅನೇಕ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

5 / 8
ಸರ್ಫರಾಜ್ ಖಾನ್ ಅವರ ದೇಶೀಯ ದಾಖಲೆಯು ಅತ್ಯುತ್ತಮವಾಗಿದೆ. ಇತ್ತೀಚೆಗೆ ಸರ್ಫರಾಜ್ ಇಂಗ್ಲೆಂಡ್ ಲಯನ್ಸ್ ವಿರುದ್ಧ 160 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ನಂತರ ಎರಡನೇ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್ ಬದಲಿಗೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಯಿತು. ಆದರೆ ಈಗ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಶ್ರೇಯಸ್ ಅಯ್ಯರ್ ಅವರನ್ನು ಹೊರಹಾಕುವ ಕಠಿಣ ಹೆಜ್ಜೆ ಇಡಬಹುದೇ ಅಥವಾ ಮತ್ತೊಮ್ಮೆ ಅವಕಾಶ ನೀಡುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.

6 / 8
ಇದುವರೆಗೆ ಶ್ರೇಯಸ್ ಅಯ್ಯರ್ ಭಾರತ ಪರ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 36.86 ಸರಾಸರಿಯೊಂದಿಗೆ ಕೇವಲ 811 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 5 ಅರ್ಧ ಶತಕ ಮತ್ತು ಕೇವಲ 1 ಶತಕವನ್ನು ಸಿಡಿಸಿದ್ದಾರೆ.

7 / 8
ಮತ್ತೊಂದೆಡೆ, ಸರ್ಫರಾಜ್ ಖಾನ್ 45 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 14 ಶತಕ ಮತ್ತು 11 ಅರ್ಧ ಶತಕಗಳ ಸಹಾಯದಿಂದ 69.85 ಸರಾಸರಿಯಲ್ಲಿ 3912 ರನ್ ಗಳಿಸಿದ್ದಾರೆ.

8 / 8
Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್