AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಬ್ಯಾಟರ್​ಗೆ ಇಂಜುರಿ; ಸರಣಿಯಿಂದ ಹೊರಗುಳಿಯುವ ಸಾಧ್ಯತೆ..!

IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ರಾಜ್​ಕೋಟ್​ನಲ್ಲಿ ಆರಂಭವಾಗಲಿದೆ. ಈ ನಡುವೆ ಟೀಂ ಇಂಡಿಯಾ ಪಾಳಯದಲ್ಲಿ ಆಟಗಾರರ ಇಂಜುರಿ ಸರಣಿ ಮುಂದುವರೆದಿದ್ದು, ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 09, 2024 | 5:35 PM

Share
ಟೀಂ ಇಂಡಿಯಾ ಪ್ರಸ್ತುತ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡುತ್ತಿದೆ. ಸದ್ಯ ಮೊದಲೆರಡು ಪಂದ್ಯಗಳ ಬಳಿಕ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ಆರಂಭವಾಗಲಿದೆ.

1 / 7
ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ ಎಂದು ವರದಿಯಾಗಿದೆ.

2 / 7
ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್ ಮಾಡುವಾಗಲೂ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರು ಸರಣಿಯಲ್ಲಿ ಮುಂದುವರೆಯುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಶ್ರೇಯಸ್ ಅಯ್ಯರ್ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದರೆ, ಸರ್ಫರಾಜ್ ಖಾನ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಬಹುದು.

3 / 7
ಬೆನ್ನು ನೋವಿನ  ಹೊರತಾಗಿ ಇಡೀ ಸರಣಿಯಲ್ಲಿ ಶ್ರೇಯಸ್‌ ಅಯ್ಯರ್ ಪ್ರದರ್ಶನವೇನು ವಿಶೇಷವಾಗಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಬೇಕು ಎಂಬ ಬೇಡಿಕೆ ಜೋರಾಗಿತ್ತು. ಇದೀಗ ಅಯ್ಯರ್ ಗಾಯಗೊಂಡಿರುವ ಕಾರಣ ಅವರು ಬೆಂಗಳೂರಿನ ಎನ್​ಸಿಗೆ ಮರಳುವ ಸಾಧ್ಯತೆಗಳಿವೆ.

4 / 7
ಒಂದು ವೇಳೆ ಅಯ್ಯರ್ ಟೀಂ ಇಂಡಿಯಾದಿಂದ ಹೊರಬಿದ್ದರೆ ಅವರ ಜಾಗದಲ್ಲಿ ಸರ್ಫರಾಜ್‌ ಖಾನ್ ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆಗಳಿವೆ. ಈಗಾಗಲೇ ತಂಡ ಸೇರಿಕೊಂಡಿರುವ ಸರ್ಫರಾಜ್ ಎರಡನೇ ಟೆಸ್ಟ್ ಪಂದ್ಯದ ವೇಳೆ ಫೀಲ್ಡಿಂಗ್ ಕೂಡ ಮಾಡಿದ್ದರು.

5 / 7
ಅಯ್ಯರ್ ಗಾಯಗೊಳ್ಳುವುದರೊಂದಿಗೆ ಟೀಂ ಇಂಡಿಯಾದಲ್ಲಿ ಇಂಜುರಿಗೆ ತುತ್ತಾದವರ ಸಂಖ್ಯೆ ಮೂರಕ್ಕೇರಿದೆ. ಅಯ್ಯರ್​ಗೂ ಮೊದಲು ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಕೂಡ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಂಡಿದ್ದರು.

6 / 7
ಹೀಗಾಗಿ ಇವರಿಬ್ಬರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಇದೀಗ ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನ ಈ ಇಬ್ಬರ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಇವರಿಬ್ಬರು ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ತಂಡದ ಮಾಜಿ ನಾಯಕ ಕೊಹ್ಲಿ ಬಗ್ಗೆ ಸಸ್ಪೆನ್ಸ್ ಹಾಗೆ ಉಳಿದಿದೆ.

7 / 7
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ