AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಕೊನೆಗೂ ಅರ್ಧಶತಕ ಬಾರಿಸಿದ ಶುಭ್​ಮನ್ ಗಿಲ್

India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ (Shubman Gill) ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ. ಇದು ಶುಭ್​ಮನ್ ಬ್ಯಾಟ್​ನಿಂದ ಮೂರನೇ ಕ್ರಮಾಂಕದಲ್ಲಿ ಮೂಡಿಬಂದಿರುವ ಮೊದಲ ಅರ್ಧಶತಕ ಎಂಬುದು ವಿಶೇಷ.

TV9 Web
| Edited By: |

Updated on:Feb 04, 2024 | 2:39 PM

Share
India vs England 2nd Test: ಸತತ ವೈಫ್ಯದಿಂದ ಕಂಗೆಟ್ಟಿದ್ದ ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್ (Shubman Gill) ಬ್ಯಾಟ್​ನಿಂದ ಕೊನೆಗೂ ಅರ್ಧಶತಕ ಮೂಡಿಬಂದಿದೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಗಿಲ್ ಕೇವಲ 59 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.

1 / 7
ಇದರೊಂದಿಗೆ ಕಳೆದ 11 ಇನಿಂಗ್ಸ್​ಗಳಲ್ಲಿನ ಕಳಪೆ ಬ್ಯಾಟಿಂಗ್​ಗೆ ವಿರಾಮ ಬಿದ್ದಂತಾಗಿದೆ. ಅಂದರೆ ಶುಭ್​ಮನ್ ಗಿಲ್ ಕೊನೆಯ 11 ಇನಿಂಗ್ಸ್​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಇದುವರೆಗೆ ಕ್ರಮವಾಗಿ 47, 6, 10, 29*, 2, 26, 36, 10, 23, 0, 34 ರನ್ ಬಾರಿಸಿ ಔಟಾಗಿದ್ದರು.

2 / 7
ವಿಶೇಷ ಎಂದರೆ ಮಾರ್ಚ್​ 12, 2023 ರಲ್ಲಿ ಕೊನೆಯ ಬಾರಿ ಶತಕ ಸಿಡಿಸಿದ್ದ ಶುಭ್​ಮನ್ ಗಿಲ್ ಆ ಬಳಿಕ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಮತ್ತೆ ಫಾರ್ಮ್​ ಕಂಡುಕೊಳ್ಳುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

3 / 7
ಶುಭ್​ಮನ್ ಗಿಲ್​ ಅವರ ಅರ್ಧಶತಕದ ನೆರವಿನಿಂದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 35 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 4 ವಿಕೆಟ್ 130 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಗಿಲ್ ಹಾಗೂ ಅಕ್ಷರ್ ಪಟೇಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

4 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (209) ದ್ವಿಶತಕ ಬಾರಿಸಿ ಮಿಂಚಿದ್ದರು. ಈ ದ್ವಿಶತಕದ ನೆರವಿನಿಂದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿತು.

5 / 7
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ ಆಡಿದ ಇಂಗ್ಲೆಂಡ್ ತಂಡವು ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿತು. ಕರಾರುವಾಕ್ ದಾಳಿ ಸಂಘಟಿಸಿದ ಬುಮ್ರಾ ಕೇವಲ 45 ರನ್ ನೀಡಿ 6 ವಿಕೆಟ್ ಪಡೆದಿದ್ದರು. ಪರಿಣಾಮ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 253 ರನ್​ಗಳಿಗೆ ಆಲೌಟ್ ಆಯಿತು.

6 / 7
143 ರನ್​ಗಳ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾಗೆ ಅರ್ಧಶತಕ ಬಾರಿಸಿ ಶುಭ್​ಮನ್ ಗಿಲ್ ಆಸರೆಯಾಗಿ ನಿಂತಿದ್ದಾರೆ. ಈ ಮೂಲಕ ಭಾರತ ತಂಡವು ಭೋಜನ ವಿರಾಮದ ವೇಳೆಗೆ 273 ರನ್​ಗಳ ಮುನ್ನಡೆ ಸಾಧಿಸಿದೆ.

7 / 7

Published On - 11:46 am, Sun, 4 February 24

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್