ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್ಗಳು ಇಂಗ್ಲೆಂಡ್ನ ಎಲ್ಲಾ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಇದಾಗ್ಯೂ ಒಂದೆಡೆ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 68 ರನ್ ಬಾರಿಸುವಲ್ಲಿ ಸಫಲರಾದರು. ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 132 ರನ್ ಗಳಿಸಿ ಆಲೌಟ್ ಆಯಿತು.