AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಆಂಗ್ಲರ ಮುಂದೆ ಕನ್ನಡಿಗನ ಪಾತ್ರ ನಿರ್ಣಾಯಕ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Jun 19, 2025 | 12:30 PM

Share
ಬಲಿಷ್ಠ ಇಂಗ್ಲೆಂಡ್ ತಂಡವನ್ನು ಎದುರಿಸಲು ಯಂಗ್ ಇಂಡಿಯಾ ಸಜ್ಜಾಗಿದೆ. ಈ ಯಂಗ್​ ಇಂಡಿಯಾದಲ್ಲಿರುವ ಅತ್ಯಂತ ಅನುಭವಿ ಬ್ಯಾಟರ್ ಎಂದರೆ ನಮ್ಮ ಕನ್ನಡಿಗ ಕೆಎಲ್ ರಾಹುಲ್ (KL Rahul). 33 ವರ್ಷದ ರಾಹುಲ್ ಈಗಾಗಲೇ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿಯೇ ಈ ಬಾರಿ ಕನ್ನಡಿಗನ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

1 / 5
ಈ ನಿರೀಕ್ಷೆಗಳೊಂದಿಗೆ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಭಾರತ ಟೆಸ್ಟ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರೋಹಿತ್ ಶರ್ಮಾ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ರಾಹುಲ್, ಯಶಸ್ವಿ ಜೈಸ್ವಾಲ್ ಜೊತೆ ಇನಿಂಗ್ಸ್ ಆರಂಭಿಸಿದ್ದರು.

2 / 5
ಹೀಗಾಗಿ ಈ ಬಾರಿ ಶುಭಾರಂಭದ ಜವಾಬ್ದಾರಿ ಕೆಎಲ್ ರಾಹುಲ್ ಹೆಗಲೇರುವುದು ಬಹುತೇಕ ಖಚಿತ. ಏಕೆಂದರೆ ಇಂಗ್ಲೆಂಡ್​ನಲ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿದ ಅನುಭವ ಕೂಡ ಕೆಎಲ್​ಆರ್​ ಜೊತೆಗಿದೆ. ಈ ಒಂಭತ್ತು ಪಂದ್ಯಗಳಲ್ಲಿ 18 ಇನಿಂಗ್ಸ್ ಆಡಿರುವ ರಾಹುಲ್ 614 ರನ್​ ಕಲೆಹಾಕಿದ್ದಾರೆ. ಅಂದರೆ 34.11 ಸರಾಸರಿಯಲ್ಲಿ ಆಂಗ್ಲರ ನಾಡಿನಲ್ಲಿ ರನ್​ಗಳಿಸಿದ್ದಾರೆ.

3 / 5
ಈ 18 ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಬ್ಯಾಟ್​ನಿಂದ 2 ಭರ್ಜರಿ ಶತಕಗಳು ಸಹ ಮೂಡಿಬಂದಿವೆ. ಹಾಗೆಯೇ ಒಂದು ಅರ್ಧಶತಕವನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಕೂಡ ಕೆಎಲ್ ರಾಹುಲ್. ಇಂಗ್ಲೆಂಡ್ ವಿರುದ್ಧ ಈವರೆಗೆ 24 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ ಒಟ್ಟು 955 ರನ್ ಕಲೆಹಾಕಿದ್ದಾರೆ.

4 / 5
ಹೀಗಾಗಿಯೇ ಆಂಗ್ಲರ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಿದ್ದರೆ ಕನ್ನಡಿಗನ ಪಾತ್ರ ನಿರ್ಣಾಯಕವಾಗಲಿದೆ. ಈ ಜವಾಬ್ದಾರಿಯುತ ಪಾತ್ರದೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಸೆಟೆದು ನಿಂತು ಭಾರತ ತಂಡಕ್ಕೆ ಗೆಲುವು ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ

ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ

ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ

ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD

ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!

ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್

ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ