AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ತಂಡದಲ್ಲಿರದ ಆಟಗಾರನನ್ನು ಕಣಕ್ಕಿಳಿಸಿದ ಇಂಗ್ಲೆಂಡ್

England vs India, 1st Test: ಲೀಡ್ಸ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲೊ 471 ರನ್ ಕಲೆಹಾಕಿತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ 465 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ 90 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Jun 23, 2025 | 7:54 AM

Share
ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಣ ತೆಂಡೂಲ್ಕರ್-ಅ್ಯಂಡರ್ಸನ್ ಟೆಸ್ಟ್​ ಸರಣಿಯ ಮೊದಲ ಪಂದ್ಯವು ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೂರನೇ ದಿನದಾಟದಂದು ಇಂಗ್ಲೆಂಡ್ ತಂಡದಲ್ಲಿರದ ಆಟಗಾರನನ್ನು ಮೈದಾನಕ್ಕಿಳಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.

1 / 6
ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​​ನ 7ನೇ ಓವರ್​ ವೇಳೆ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು. ಈ ವೇಳೆ ಅವರ ಬದಲಿಯಾಗಿ ಫೀಲ್ಡರ್​ಗೆ ಬಂದಿದ್ದು ತಂಡದಲ್ಲಿ ಇರದ ಯುವ ಆಟಗಾರ ಯಶ್ ವಗಾಡಿಯಾ. ಅಂದರೆ 12ನೇ ಆಟಗಾರನಾಗಿ ಯಶ್ ಅವರನ್ನು ಫೀಲ್ಡಿಂಗ್​ನಲ್ಲಿ ಕಣಕ್ಕಿಳಿಸಲಾಗಿತ್ತು.

2 / 6
ಹೀಗೆ ಕಣಕ್ಕಿಳಿಸಲು ಮುಖ್ಯ ಕಾರಣ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನ  ಹೊಸ ಪ್ರಯೋಗ. ಇಸಿಬಿ ರಾಷ್ಟ್ರೀಯ ಪ್ಲೇಯರ್ಸ್ ಜೊತೆ ಬೆರೆಯಲು, ಅವರಿಂದ ಕಲಿಯಲು ಯುವ ಆಟಗಾರರಿಗೆ ಅನುವು ಮಾಡಿಕೊಡುತ್ತಿದೆ. ಅದರ ಭಾಗವಾಗಿ ಆಯಾ ಹೋಮ್ ಗ್ರೌಂಡ್​ನ ಕೌಂಟಿ ತಂಡದ ಯುವ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

3 / 6
ಹೀಗೆ ಆಯ್ಕೆಯಾದ ಯುವ ಆಟಗಾರರನ್ನು ಇಂಗ್ಲೆಂಡ್ ತಂಡವು ತನ್ನ 12ನೇ ಪ್ಲೇಯರ್ ಎಂದು ಪರಿಗಣಿಸಿ, ಫೀಲ್ಡಿಂಗ್ ವೇಳೆ ಕಣಕ್ಕಿಳಿಸುತ್ತಿದ್ದಾರೆ. ಈ ಮೂಲಕ ಯುವ ಆಟಗಾರರನ್ನು ಸಜ್ಜುಗೊಳಿಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ವಿಶೇಷ ಪ್ಲ್ಯಾನ್ ರೂಪಿಸಿದೆ.

4 / 6
ಅದರ ಭಾಗವಾಗಿ ಯಶ್ ವಗಾಡಿಯಾ ಭಾರತದ ವಿರುದ್ಧದ ಪಂದ್ಯದ ವೇಳೆ ಕಾಣಿಸಿಕೊಂಡಿದ್ದಾರೆ. ಇನ್ನು ಯಶ್ ಭಾರತೀಯ ಮೂಲದ ಇಂಗ್ಲೆಂಡ್ ಪ್ರಜೆ ಎಂಬುದು ವಿಶೇಷ. ಇಂಗ್ಲೆಂಡ್ ಕೌಂಟಿ ಕ್ರಿಕೆಟ್​ನಲ್ಲಿ ಯಾರ್ಕ್ ಶೈರ್ ಪರ ಕಣಕ್ಕಿಳಿಯುವ ಯಶ್ ಇದೀಗ ಲೀಡ್ಸ್ ಟೆಸ್ಟ್​ನಲ್ಲಿ ಇಂಗ್ಲೆಂಡ್ ತಂಡದ ಹೆಚ್ಚುವರಿ ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 465 ರನ್​ಗಳಿಸಿ ಸರ್ವಪತನ ಕಂಡಿದೆ. ಇದೀಗ 6 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 90 ರನ್ ಕಲೆಹಾಕಿದೆ.

6 / 6
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ

ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್

ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ

ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ

ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?

ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​

ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು