- Kannada News Photo gallery Cricket photos IND vs ENG: Yashasvi Jaiswal and Harshit Rana are making their India ODI debuts
ವಿರಾಟ್ ಕೊಹ್ಲಿ ಅಲಭ್ಯ: ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ
ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಶುರುವಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಗಾಯದ ಕಾರಣ ಈ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ.
Updated on:Feb 06, 2025 | 1:30 PM

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಪಾದಾರ್ಪಣೆ ಮಾಡಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಯುವ ವೇಗಿ ಹರ್ಷಿತ್ ರಾಣಾ ಕಣಕ್ಕಿಳಿದಿದ್ದಾರೆ.

ಇನ್ನು ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಕಟಕ್ನಲ್ಲಿ ನಡೆಯಲಿರುವ 2ನೇ ಪಂದ್ಯದ ವೇಳೆ ಅವರು ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಸ್ಪೋರ್ಟ್ಸ್ 18 ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ ಸೈಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
Published On - 1:06 pm, Thu, 6 February 25



















