IND vs ENG: ಕಿಂಗ್ ಕೊಹ್ಲಿಯ ಅತಿ ದೊಡ್ಡ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!
Yashasvi Jaiswal: ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 1 ರನ್ ಕಲೆಹಾಕುವ ಮೂಲಕ ಟೆಸ್ಟ್ ವೃತ್ತಿಜೀವನದಲ್ಲಿ ಕಿಂಗ್ ಕೊಹ್ಲಿಯ ಅತಿದೊಡ್ಡ ದಾಖಲೆಯೊಂದನ್ನು ಮುರಿದಿದ್ದಾರೆ.
1 / 7
ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಂಗ್ಲರ ತಂಡ 218 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇತ್ತ ಭಾರತದ ಪರ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 1 ರನ್ ಕಲೆಹಾಕುವ ಮೂಲಕ ಟೆಸ್ಟ್ ವೃತ್ತಿಜೀವನದಲ್ಲಿ ಅತಿ ದೊಡ್ಡ ಸಾಧನೆ ಮಾಡಿದ್ದಾರೆ.
2 / 7
ವಾಸ್ತವವಾಗಿ ಈ ಪಂದ್ಯದಲ್ಲಿ ಜೈಸ್ವಾಲ್ 1 ರನ್ ಕಲೆಹಾಕಿದ ಕೂಡಲೇ ಇಡೀ ಸರಣಿಯಲ್ಲಿ ಅವರು ಕಲೆಹಾಕಿದ ರನ್ಗಳ ಮೊತ್ತ 656 ರನ್ಗಳಿಗೆ ಏರಿಕೆಯಾಗಿದೆ. ಈ ಮೂಲಕ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಕಲೆಹಾಕಿದ್ದ ಕಿಂಗ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
3 / 7
2016 ರಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬರೋಬ್ಬರಿ 655 ರನ್ ಬಾರಿಸಿ ಆಂಗ್ಲರ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಬಾರಿಸಿದ ಭಾರತೀಯರ ಪೈಕಿ ಮೊದಲ ಸ್ಥಾನದಲ್ಲಿದ್ದರು.
4 / 7
ಇದೀಗ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ 655ಕ್ಕೂ ಅಧಿಕ ರನ್ ಬಾರಿಸಿರುವ ಜೈಸ್ವಾಲ್, ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.
5 / 7
ಇದಲ್ಲದೆ ದ್ವಿಪಕ್ಷೀಯ ಟೆಸ್ಟ್ ಸರಣಿಯೊಂದರಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್ಗಳ ಪೈಕಿ ಜೈಸ್ವಾಲ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
6 / 7
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಸುನಿಲ್ ಗವಾಸ್ಕರ್ ವೆಸ್ಟ್ ಇಂಡೀಸ್ ವಿರುದ್ಧ 1971 ಹಾಗೂ 1979 ರಲ್ಲಿ ಕ್ರಮವಾಗಿ 774 ಹಾಗೂ 732 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದಾರೆ.
7 / 7
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 2014- 15 ರಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 692 ರನ್ ಕಲೆಹಾಕಿದ್ದರು.