- Kannada News Photo gallery Cricket photos IND vs IRE Jasprit Bumrah To Lead Team India's Probable Squad For Ireland T20Is
IND vs IRE: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ! ಐರ್ಲೆಂಡ್ ಪ್ರವಾಸಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ
IND vs IRE: ಇಂಜುರಿಯಿಂದಾಗಿ ಸಾಕಷ್ಟು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ವೇಗಿ ಜಸ್ಪ್ರೀತ್ ಬುಮ್ರಾ, ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಭಾರತ ತಂಡಕ್ಕೆ ಎಂಟ್ರಿಕೊಡಲು ಸಿದ್ಧರಾಗಿದ್ದಾರೆ.
Updated on: Jul 09, 2023 | 8:38 AM

ಒಂದು ತಿಂಗಳಿಗೂ ಹೆಚ್ಚು ಕಾಲ ವಿರಾಮದ ನಂತರ ಇದೀಗ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಜುಲೈ 12 ರಿಂದ ಆರಂಭವಾಗಲಿರುವ ಈ ಪ್ರವಾಸ ಆಗಸ್ಟ್ 13ಕ್ಕೆ ಅಂತ್ಯವಾಗಲಿದೆ. ಬರೋಬ್ಬರಿ 1 ತಿಂಗಳ ಈ ಅವಧಿಯನ್ನು ಟೀಂ ಇಂಡಿಯಾ ಕೆರಿಬಿಯನ್ ನಾಡಿನಲ್ಲೇ ಕಳೆಯಬೇಕಿದೆ.

ಜುಲೈ 12 ರಿಂದ ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಆರಂಭವಾದರೆ, ಆ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದೆ. ಅಂತಿಮವಾಗಿ ವಿಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ಆಡಲ್ಲಿರುವ ಭಾರತ ಆಗಸ್ಟ್ 13 ರಂದು ತನ್ನ ಪ್ರವಾಸ ಮುಗಿಸಲಿದೆ.

ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಲಿದೆ. ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಹಿರಿಯ ಆಟಗಾರರನ್ನು ಈ ಸರಣಿಯಿಂದ ದೂರವಿಡಲು ಚಿಂತಿಸಿರುವ ಬಿಸಿಸಿಐ ಹೊಸಬರಿಗೆ ಮಣೆ ಹಾಕುವುದು ಖಚಿತ.

ಹೀಗಾಗಿ ಸದ್ಯಕ್ಕೆ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಕೂಡ ಈ ಸರಣಿಯನ್ನು ಆಡುವುದು ಅನುಮಾನವಾಗಿದೆ. ಆದ್ದರಿಂದ ಅವರ ಸ್ಥಾನದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸುವ ಸಾಧ್ಯತೆಗಳಿವೆ.

ಇಂಜುರಿಯಿಂದಾಗಿ ಸಾಕಷ್ಟು ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ವೇಗಿ ಜಸ್ಪ್ರೀತ್ ಬುಮ್ರಾ, ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಭಾರತ ತಂಡಕ್ಕೆ ಎಂಟ್ರಿಕೊಡಲು ಸಿದ್ಧರಾಗಿದ್ದಾರೆ. ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಬುಮ್ರಾ ಫಿಟ್ ಆಗುವುದು ಟೀಂ ಇಂಡಿಯಾಕ್ಕೆ ಅಗತ್ಯವಾಗಿದೆ. ಹೀಗಾಗಿ ಬುಮ್ರಾ ಭಾರತ ತಂಡದ ನಾಯಕತ್ವವಹಿಸಿಕೊಳ್ಳಬಹುದಾಗಿದೆ.

ಇನ್ನು ಐರ್ಲೆಂಡ್ ಪ್ರವಾಸಕ್ಕೆ ಯುವ ಟೀಂ ಇಂಡಿಯಾ ಆಯ್ಕೆಯಾಗುವುದು ಖಚಿತವಾಗಿದ್ದು, ಈ ಪ್ರವಾಸದಲ್ಲಿ ಐಪಿಎಲ್ ಸ್ಟಾರ್ ಆಟಗಾರರು ಆಡುವ ಸಾಧ್ಯತೆಗಳಿವೆ. ಅವರಲ್ಲಿ ರಿಂಕು ಸಿಂಗ್ ಹೆಸರು ಮುಂಚೂಣಿಯಲ್ಲಿದೆ. ರಿಂಕುರನ್ನು ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ರಿಂಕು ತಂಡಕ್ಕೆ ಆಯ್ಕೆಯಾಗಲಿಲ್ಲ.

ಇದೀಗ ಐರ್ಲೆಂಡ್ ವಿರುದ್ಧ ರಿಂಕು ಭಾರತ ತಂಡಕ್ಕೆ ಪ್ರವೇಶ ಮಾಡುವುದು ಖಚಿತವಾಗಿದೆ. ರಿಂಕು ಸಿಂಗ್ ಅಲ್ಲದೆ ಭಾರತ ತಂಡದಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ? ಐರ್ಲೆಂಡ್ ಪ್ರವಾಸಕ್ಕೆ ಭಾರತ ಸಂಭಾವ್ಯ ತಂಡ ಹೇಗಿರಲಿದೆ ಎಂಬುದರ ವಿವರ ಇಲ್ಲಿದೆ.

ಆರಂಭಿಕರು: ಐರ್ಲೆಂಡ್ ಪ್ರವಾಸದಲ್ಲಿ ಆರಂಭಿಕರಾಗಿ ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಳ್ಳಬಹುದು.

ಮಧ್ಯಮ ಕ್ರಮಾಂಕ: ರಾಹುಲ್ ತ್ರಿಪಾಠಿ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಆಡಬಹುದು

ಆಲ್ ರೌಂಡರ್ಸ್: ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಕೃನಾಲ್ ಪಾಂಡ್ಯ

ಬೌಲರ್‌ಗಳು: ಜಸ್ಪ್ರೀತ್ ಬುಮ್ರಾ, ಮೋಹಿತ್ ಶರ್ಮಾ, ತುಷಾರ್ ದೇಶಪಾಂಡೆ, ಅರ್ಷದೀಪ್ ಸಿಂಗ್

ಸ್ಪಿನ್ನರ್ಸ್: ವರುಣ್ ಚಕ್ರವರ್ತಿ, ಸುಯಶ್ ಶರ್ಮಾ

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ: ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಕೃನಾಲ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೋಹಿತ್ ಶರ್ಮಾ, ತುಷಾರ್ ದೇಶ್‌ಪಾಂಡೆ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ, ಅರ್ಷದೀಪ್ ಸಿಂಗ್



















