- Kannada News Photo gallery Cricket photos IND vs IRE Laxman to coach in Ireland Dravid get mini break before World Cup
IND vs IRE: ದ್ರಾವಿಡ್ಗೆ ವಿಶ್ರಾಂತಿ; ಐರ್ಲೆಂಡ್ ಪ್ರವಾಸಕ್ಕೆ ಹಂಗಾಮಿ ಮುಖ್ಯ ಕೋಚ್ ಆಯ್ಕೆ
IND vs IRE T20 Series: ಭಾರತ ಮತ್ತು ಐರ್ಲೆಂಡ್ ನಡುವಿನ ಎಲ್ಲಾ ಮೂರು ಟಿ20 ಪಂದ್ಯಗಳು ಡಬ್ಲಿನ್‌ನಲ್ಲಿ ಆಗಸ್ಟ್ 18, 20 ಮತ್ತು 23 ರಂದು ಐರ್ಲೆಂಡ್‌ನಲ್ಲಿ ನಡೆಯಲಿವೆ.
Updated on: Jul 17, 2023 | 9:12 AM

ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ, ಕೆರಿಬಿಯನ್ನರ ವಿರುದ್ಧ ಮೂರು ಮಾದರಿಯ ಕ್ರಿಕೆಟ್ನ ಸರಣಿಯನ್ನು ಆಡುತ್ತಿದೆ. ಇದರಲ್ಲಿ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಯೂ ಸೇರಿದೆ.

ಟಿ20 ಸರಣಿಯೊಂದಿಗೆ ವಿಂಡೀಸ್ ಪ್ರವಾಸ ಮುಗಿಸಲಿರುವ ಟೀಂ ಇಂಡಿಯಾ ಆ ಬಳಿಕ ಐರ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ ಅವರು ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

When and Where Ireland vs India Third T20I Match check Live Streaming Details

ಆಯ್ಕೆದಾರರು ಐರ್ಲೆಂಡ್ ಸರಣಿಗೆ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರೆ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಪ್ರವಾಸದಲ್ಲಿ ಎರಡನೇ ಶ್ರೇಣಿಯ ಟೀಂ ಇಂಡಿಯಾವನ್ನು ಮುನ್ನಡೆಸುತ್ತಾರೆ ಎಂದು ವರದಿಯಾಗಿದೆ. ಇವರೊಂದಿಗೆ ತಂಡದ ಮುಖ್ಯ ಕೋಚ್ ಸೇರಿದಂತೆ ಸಹಾಯಕ ಸಿಬ್ಬಂದಿಗಳು ಬದಲಾಗಲಿದ್ದಾರೆ ಎಂದು ವರದಿಯಾಗಿದೆ.

ಕ್ರಿಕ್‌ಬಝ್ ವರದಿಯ ಪ್ರಕಾರ, ಮುಂಬರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಪ್ರಸ್ತುತ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿ ತಂಡವು ಐರ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ವರದಿ ಮಾಡಿದೆ.

ಹೀಗಾಗಿ ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರು ವಿವಿಎಸ್ ಲಕ್ಷ್ಮಣ್ ಅವರು ರಾಹುಲ್ ದ್ರಾವಿಡ್ ಬದಲಿಗೆ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಹಾಗೆಯೇ ಸಿತಾಂಶು ಕೊಟಕ್, ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್‌ಗಳು), ಟ್ರಾಯ್ ಕೂಲಿ ಮತ್ತು ಸಾಯಿರಾಜ್ ಬಹುತುಲೆ (ಬೌಲಿಂಗ್ ಕೋಚ್‌ಗಳು) ಐರ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡದ ಹಂಗಾಮಿ ತರಬೇತುದಾರಾಗುವ ಸಾಧ್ಯತೆಗಳಿವೆ.




