AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs IRE: ಐರ್ಲೆಂಡ್ ಪ್ರವಾಸಕ್ಕೆ ಸೂರ್ಯಕುಮಾರ್ ಯಾದವ್​ಗೆ ಭಾರತ ತಂಡದ ನಾಯಕತ್ವ..?

IND vs IRE: ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

ಪೃಥ್ವಿಶಂಕರ
|

Updated on: Jul 23, 2023 | 8:07 AM

Share
ಪ್ರಸ್ತುತ ವಿಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾದ ಅನುಭವಿ ಆಟಗಾರರು ವಿಶ್ರಾಂತಿ ಪಡೆಯಲ್ಲಿದ್ದು ಯುವ ಪಡೆಯನ್ನು ಕಳುಹಿಸಲು ಬಿಸಿಸಿಐ ಚಿಂತಿಸಿದೆ.

1 / 6
ಈ ಹಿಂದೆ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು. ಆದರೆ ಈ ಪ್ರವಾಸದಿಂದ ಪಾಂಡ್ಯಗೂ ವಿಶ್ರಾಂತಿ ನೀಡಲಾಗುತ್ತಿದ್ದು, ಅವರ ಉಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ತಂಡದ ಸಾರಥ್ಯವಹಿಸುವ ಮಾತುಗಳು ಕೇಳಿಬರುತ್ತಿವೆ.

2 / 6
ಹೀಗಾಗಿ ವಿಶ್ವದ ನಂ.1 ಟಿ20 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಮೆನ್ ಇನ್ ಬ್ಲೂ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಈ ಹಿಂದೆ ಹಲವು ಮಾಧ್ಯಮಗಳು ವರದಿ ಮಾಡಿದ್ದವು.

3 / 6
ಆದರೆ ತಿಂಗಳುಗಳ ನಂತರ ಬುಮ್ರಾ ತಂಡಕ್ಕೆ ಮರಳುವುದು ಖಚಿತ ಎಂದೂ ಹೇಳಲಾಗುತ್ತಿದ್ದರೂ, ಅವರಿಗೆ ನಾಯಕತ್ವ ನೀಡುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಐರ್ಲೆಂಡ್ ಪ್ರವಾಸದಲ್ಲಿ ಬುಮ್ರಾ ತಮ್ಮ ಹಳೆಯ ಲಯಕ್ಕೆ ಮರಳಿದರೆ, ಆ ಬಳಿಕ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ.

4 / 6
ಹಾರ್ದಿಕ್ ಪಾಂಡ್ಯ ಜೊತೆಗೆ ಶುಭ್​ಮನ್ ಗಿಲ್ ಕೂಡ ಐರ್ಲೆಂಡ್‌ ಪ್ರವಾಸಕ್ಕೆ ಲಭ್ಯರಿಲ್ಲ. ಮುಂಬರುವ ತಿಂಗಳುಗಳಲ್ಲಿ ತಂಡವು ಸಾಕಷ್ಟು ಕ್ರಿಕೆಟ್ ಆಡುವ ಕಾರಣ ಕೆಲಸದ ಹೊರೆ ಕಡಿಮೆ ಮಾಡುವ ಸಲುವಾಗಿ ಬಿಸಿಸಿಐ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮುಂದಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

5 / 6
ಆಗಸ್ಟ್ 18 ರಿಂದ ಆಗಸ್ಟ್ 23 ರವರೆಗೆ ಮೂರು ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್‌ಗೆ ಪ್ರಯಾಣಿಸಲಿರುವ ಟೀಂ ಇಂಡಿಯಾ, ಆ ನಂತರ ಆಗಸ್ಟ್ 30 ರಿಂದ ಏಷ್ಯಾಕಪ್​ನಲ್ಲಿ ಭಾಗವಹಿಸಲಿದೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!