- Kannada News Photo gallery Cricket photos IND vs NAM: Will Abhishek Sharma be playing in today's match
IND vs NAM: ಇಂದು ಅಭಿಷೇಕ್ ಶರ್ಮಾ ಕಣಕ್ಕಿಳಿಯುತ್ತಾರಾ?
India vs Namibia: ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯವಾಡಲು ಸಜ್ಜಾಗಿದೆ. ಅದರಂತೆ ಇಂದು (ಫೆ.12) ನಡೆಯಲಿರುವ ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತ ತಂಡವು ನಮೀಬಿಯವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾ ಕಣಕ್ಕಿಳಿಯುವುದು ಅನುಮಾನ.
Updated on: Feb 12, 2026 | 2:30 PM

ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನಮೀಬಿಯ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ.

ಏಕೆಂದರೆ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಕಳೆದ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಅವರು ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಮೀಬಿಯ ವಿರುದ್ಧ ಆಡುತ್ತಾರಾ ಇಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಗುರುವಾರ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಅವರು ಇಂದಿನ ಮ್ಯಾಚ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಅಂದರೆ ಇನ್ನೂ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆದು ಮತ್ತೆ ಮೈದಾನಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಹೀಗಾಗಿ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಹಾಗೆಯೇ ಈ ಮ್ಯಾಚ್ನಲ್ಲಿ ಜಸ್ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಕಂಡು ಬರಬಹುದು.

ಟೀಮ್ ಇಂಡಿಯಾ ಸಂಭಾವ್ಯ ಇಲೆವೆನ್: ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
