IND vs NAM: ಇಂದು ಅಭಿಷೇಕ್ ಶರ್ಮಾ ಕಣಕ್ಕಿಳಿಯುತ್ತಾರಾ?

Updated on: Feb 12, 2026 | 2:30 PM

India vs Namibia: ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯವಾಡಲು ಸಜ್ಜಾಗಿದೆ. ಅದರಂತೆ ಇಂದು (ಫೆ.12) ನಡೆಯಲಿರುವ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ತಂಡವು ನಮೀಬಿಯವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾ ಕಣಕ್ಕಿಳಿಯುವುದು ಅನುಮಾನ.

1 / 5
ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನಮೀಬಿಯ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ.

ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನಮೀಬಿಯ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ.

2 / 5

ಏಕೆಂದರೆ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಕಳೆದ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಅವರು ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಮೀಬಿಯ ವಿರುದ್ಧ ಆಡುತ್ತಾರಾ ಇಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 5

ಪ್ರಸ್ತುತ ಮಾಹಿತಿ ಪ್ರಕಾರ, ಅಭಿಷೇಕ್ ಶರ್ಮಾ ಗುರುವಾರ ಯಾವುದೇ ಅಭ್ಯಾಸ ನಡೆಸಿಲ್ಲ. ಹೀಗಾಗಿ ಅವರು ಇಂದಿನ ಮ್ಯಾಚ್​ನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಅಂದರೆ ಇನ್ನೂ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆದು ಮತ್ತೆ ಮೈದಾನಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

4 / 5

ಹೀಗಾಗಿ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಹಾಗೆಯೇ ಈ ಮ್ಯಾಚ್​ನಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಬಹುದು.

5 / 5

ಟೀಮ್ ಇಂಡಿಯಾ ಸಂಭಾವ್ಯ ಇಲೆವೆನ್: ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್​​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us