IND vs NED, ICC World Cup: ಟೀಮ್ ಇಂಡಿಯಾಕ್ಕೆ ಮತ್ತೊಂದು ಹಿನ್ನಡೆ: ಹಾರ್ದಿಕ್ ಬಳಿಕ ಮತ್ತೊಬ್ಬ ಸ್ಟಾರ್ ಆಟಗಾರ ಇಂಜುರಿ

|

Updated on: Nov 09, 2023 | 10:33 AM

Ishan Kishan Injured, India vs Netherlands ICC ODI World Cup: ಭಾರತ ಈಗಾಗಲೇ ವಿಶ್ವಕಪ್ ಟೂರ್ನಿಯಲ್ಲಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸೇವೆ ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಭಾರತ ತಂಡದ ಆಟಗಾರರು ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವಾಗ ಸ್ಟಾರ್ ಬ್ಯಾಟರ್ ಗಾಯಕ್ಕೆ ತುತ್ತಾಗಿದ್ದಾರೆ. ಇದು ರೋಹಿತ್​ಗೆ ತಲೆನೋವಾಗಿದೆ.

1 / 7
ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್‌ 2023 ರಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಆಡಿರುವ 8 ಪಂದ್ಯಗಳ ಪೈಕಿ ಎಂಟನ್ನೂ ಗೆದ್ದು ಬೀಗಿದೆ. ಏಳನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಬಳಿಕ ಭಾರತ ಅಧಿಕೃತವಾಗಿ ವಿಶ್ವಕಪ್‌ನ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ.

2 / 7
ಭಾನುವಾರ (ನವೆಂಬರ್ 12) ನಡೆಯಲಿರುವ ಟೂರ್ನಿಯ ಲೀಗ್ ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯದ ಮೊದಲು ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ.

3 / 7
ಭಾರತ ಈಗಾಗಲೇ ವಿಶ್ವಕಪ್ ಟೂರ್ನಿಯಲ್ಲಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸೇವೆ ಕಳೆದುಕೊಂಡಿದೆ. ಇವರು ಇಂಜುರಿಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವಾಗ ಸ್ಟಾರ್ ಬ್ಯಾಟರ್ ಗಾಯಕ್ಕೆ ತುತ್ತಾಗಿದ್ದಾರೆ.

4 / 7
ಬುಧವಾರ (ನವೆಂಬರ್ 8) ಬೆಂಗಳೂರಿನಲ್ಲಿ ಭಾರತೀಯ ಆಟಗಾರರು ಅಭ್ಯಾಸ ನಡೆಸುವಾಗ, ಜಸ್​ಪ್ರಿತ್ ಬುಮ್ರಾ ಅವರ ಬೌಲಿಂಗ್​ನಲ್ಲಿ ಇಶಾನ್ ಕಿಶನ್ ಇಂಜುರಿಗೆ ತುತ್ತಾಗಿದ್ದಾರೆ. ಬುಮ್ರಾ ಬೌಲಿಂಗ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್ ಗಾಯಗೊಂಡರು.

5 / 7
ಬುಮ್ರಾ ವೇಗಾಗಿ ಎಸೆದ ಚೆಂಡು ಇಶಾನ್ ಕಿಶನ್ ಅವರ ಹೊಟ್ಟೆಗೆ ಬಲವಾಗಿ ಬಡಿದಿದೆ. ಇದರಿಂದ ಇಶಾನ್ ಒಂದು ಕ್ಷಣ ನೆಲಕ್ಕೆ ಕುಸಿದರು. ಕಿಶನ್ ಗಾಯದ ಪ್ರಮಾಣ ಎಷ್ಟು ದೊಡ್ಡದಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಗಂಭೀರವಾದ ಗಾಯವಾಗಿಲ್ಲ ಎನ್ನಲಾಗಿದೆ. ನೆದರ್ಲೆಂಡ್ಸ್ ವಿರುದ್ಧ ಕೆಲ ಹಿರಿಯ ಆಟಗಾರರು ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಕಿಶನ್ ಕಣಕ್ಕಿಳಿಯಬಹುದು.

6 / 7
ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆ ಕೋಲ್ಕತ್ತಾದಿಂದ ನೇರವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತಲುಪಿದ್ದಾರೆ. ಮಂಗಳವಾರ ವಿಶ್ರಾಂತಿ ಪಡೆದುಕೊಂಡು ಬುಧವಾರ ಅಭ್ಯಾಸ ಆರಂಭಿಸಿದ್ದಾರೆ.

7 / 7
ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಝಿಲೆಂಡ್, ಇಂಗ್ಲೆಂಡ್, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನೂ ಸೋಲಿಸಿದೆ. ಸೆಮಿ ಫೈನಲ್​ನಲ್ಲಿ ಭಾರತ ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ನ್ಯೂಝಿಲೆಂಡ್ ವಿರುದ್ಧ ಪಂದ್ಯವನ್ನು ಆಡಲಿದೆ.