- Kannada News Photo gallery Cricket photos IND vs NED, ICC World Cup 2023 Indias top five players have scored 50 plus runs in an innings
ಅಗ್ರ ಐವರಿಂದ 50+ ಸ್ಕೋರ್; ಏಕದಿನ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ಭಾರತ..!
IND vs NED, ICC World Cup 2023: 2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
Updated on:Nov 12, 2023 | 10:06 PM

2023ರ ಏಕದಿನ ವಿಶ್ವಕಪ್‌ನ ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲೆಂಡ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಐವರು ಬ್ಯಾಟರ್ಗಳು 50+ ಸ್ಕೋರ್ ಬಾರಿಸಿ ಏಕದಿನ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೂಡ 54 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್ ಚಚ್ಚಿದರು.

ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶುಭ್ಮನ್ ಗಿಲ್ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 51 ರನ್‌ಗಳ ಇನ್ನಿಂಗ್ಸ್ ಆಡಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 51 ರನ್ ಬಾರಿಸಿದರು.

ಅದೇ ಸಮಯದಲ್ಲಿ ಶ್ರೇಯಸ್ ಅಯ್ಯರ್ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಕೆಎಲ್ ರಾಹುಲ್ ಕೂಡ 40 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು.

ಅರ್ಧಶತಕದ ನಂತರವೂ ಇನ್ನಿಂಗ್ಸ್ ಮುಂದುವರೆಸಿದ ಅಯ್ಯರ್, ತಮ್ಮ ಇನ್ನಿಂಗ್ಸ್ನಲ್ಲಿ 94 ಎಸೆತಗಳನ್ನು ಎದುರಿಸಿದ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳ ಸಹಿತ ಅಜೇಯ 128 ರನ್ ಚಚ್ಚಿದರು.

ಕೆಎಲ್ ರಾಹುಲ್ ಕೂಡ ಅಯ್ಯರ್ ಜೊತೆಗೆ 200 ರನ್‌ಗಳ ಜೊತೆಯಾಟ ಹಂಚಿಕೊಂಡಿದಲ್ಲದೆ, 64 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು.

ಈ ಬಾರಿ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ನಿಲ್ಲಿಸುವುದು ಕಷ್ಟವಷ್ಟೇ ಅಲ್ಲ ಅಸಾಧ್ಯ ಎನಿಸುತ್ತಿದೆ. ಭಾರತ ತಂಡ ತನ್ನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತನ್ನದೇ ದಾಖಲೆಯನ್ನು ಸರಿಗಟ್ಟಿದೆ.

ಇದಕ್ಕೂ ಮುನ್ನ 2003ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 8 ಪಂದ್ಯಗಳನ್ನು ಗೆದ್ದಿತ್ತು. ಆಗ ಟೀಂ ಇಂಡಿಯಾದ ನಾಯಕತ್ವ ಸೌರವ್ ಗಂಗೂಲಿ ಕೈಯಲ್ಲಿತ್ತು. ಹೀಗಿರುವಾಗ ಟೀಂ ಇಂಡಿಯಾ ಈ ದಾಖಲೆಯನ್ನು ಮುರಿಯಲು ಮುಂದಾಗಿದೆ.
Published On - 7:44 pm, Sun, 12 November 23



















