AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬೆಂಗಳೂರಿನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

KL Rahul Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ಪೃಥ್ವಿಶಂಕರ
|

Updated on:Nov 12, 2023 | 6:31 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

1 / 8
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

2 / 8
ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

3 / 8
ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

4 / 8
ರಾಹುಲ್​ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

5 / 8
ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

6 / 8
ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್​ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

7 / 8
ಇನ್ನು ಇನಿಂಗ್ಸ್‌ನ ಕೊನೆಯ ಓವರ್​ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.

8 / 8

Published On - 5:44 pm, Sun, 12 November 23

Follow us