- Kannada News Photo gallery Cricket photos IND vs NED, ICC World Cup 2023 KL Rahul smashes Hundred vs Netherlands
KL Rahul: ಬೆಂಗಳೂರಿನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!
KL Rahul Century: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.
Updated on:Nov 12, 2023 | 6:31 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ.

ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 64 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಚಚ್ಚಿದರು. ಈ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತಿವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.

ಈ ಮೂಲಕ ಈ ಹಿಂದೆ ಅಫ್ಘಾನಿಸ್ತಾನ ವಿರುದ್ಧ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಅವರ ಹಿಂದಿನ ದಾಖಲೆಯನ್ನು ರಾಹುಲ್ ಮುರಿದರು.

ಹಾಗೆಯೇ ಏಕದಿನ ವಿಶ್ವಕಪ್ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರಾಹುಲ್ ಪಾತ್ರರಾದರು.

ರಾಹುಲ್ಗೂ ಮೊದಲು ಇನ್ನೊಬ್ಬ ಕನ್ನಡಿಗ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. ದ್ರಾವಿಡ್ 1999 ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್‌ಗಳ ಅಮೋಘ ಆಟವಾಡಿ ಈ ಸಾಧನೆ ಮಾಡಿದ್ದರು.

ಇದು ವಿಶ್ವಕಪ್ ಇತಿಹಾಸದಲ್ಲಿ ಕೆಎಲ್ ರಾಹುಲ್ ಅವರ ಎರಡನೇ ಶತಕವಾಗಿದ್ದು, ನಡೆಯುತ್ತಿರುವ ಆವೃತ್ತಿಯಲ್ಲಿ ಮೊದಲನೆಯ ಶತಕವಾಗಿದೆ.

ಇದಲ್ಲದೆ 5ನೇ ಕ್ರಮಾಂಕದಲ್ಲಿ ಬಂದ ರಾಹುಲ್, ಶ್ರೇಯಸ್ ಅಯ್ಯರ್ ಅವರೊಂದಿಗೆ 208 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕನೇ ವಿಕೆಟ್ಗೆ ಅತ್ಯಧಿಕ ಜೊತೆಯಾಟದ ದಾಖಲೆಯಾಗಿದೆ.

ಇನ್ನು ಇನಿಂಗ್ಸ್‌ನ ಕೊನೆಯ ಓವರ್ನ ಐದನೇ ಎಸೆತದಲ್ಲಿ ರಾಹುಲ್ 102 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ 128 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಭಾರತ ಕೇವಲ 4 ವಿಕೆಟ್ ಕಳೆದುಕೊಂಡು 410 ರನ್ ಕಲೆಹಾಕಿದೆ.
Published On - 5:44 pm, Sun, 12 November 23
























