IND vs NED: ಭಾರತ ಹಾಗೂ ನೆದರ್ಲೆಂಡ್ಸ್ ನಡುವಣ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
TV9 Web | Updated By: Vinay Bhat
Updated on:
Oct 28, 2022 | 10:42 AM
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಕೂಡ ಅಗ್ರಸ್ಥಾನಕ್ಕೇರಿದೆ.
1 / 8
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ (India vs Netherlands) 56 ರನ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದೆ.
2 / 8
ಭಾರತದ ಬೌಲರ್ಗಳು ಸಂಘಟಿತ ಪ್ರದರ್ಶನ ತೋರಿದರೆ ಬ್ಯಾಟಿಂಗ್ನಲ್ಲಿ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಸಿಡಿಸಿ ಮಿಂಚಿದರು.
3 / 8
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.
4 / 8
ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಕೊಹ್ಲಿ 62 ರನ್ ಗಳಿಸಿದರೆ, ಸೂರ್ಯ ಕುಮಾರ್ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.
5 / 8
ಟಾರ್ಗೆಟ್ ಬೆನ್ನಟ್ಟಿದ ನೆದರ್ಲೆಂಡ್ಸ್ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಟಿಮ್ ಪ್ರಿಂಗ್ಲೆ 20 ರನ್ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್ ಡೌಡ್, ಬಸ್ ಡೆ ಲಿಡೆ, ಶಾರೀಜ್ ಅಹ್ಮದ್ ತಲಾ 16 ರನ್ ಗಳಿಸಿದರೆ, ಕೊಲಿನ್ ಅಕ್ಕರ್ಮನ್ 17 ರನ್ ಮಾಡಿದರು.
6 / 8
ಅಂತಿಮವಾಗಿ ನೆದರ್ಲೆಂಡ್ಸ್ 20 ಓವರ್ಗಳಲ್ಲಿ 9 ವಿಕೆಟ್ಗೆ 123 ರನ್ ಗಳಿಸಿ ಸೋಲು ಕಂಡಿತು
7 / 8
ಭಾರತ ಪರ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಹಾಗೂ ಮೊಹಮದ್ ಶಮಿ 1 ವಿಕೆಟ್ ಪಡೆದು ಮಿಂಚಿದರು.
8 / 8
ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.