ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್ಸ್ವೀಪ್ ಸಾಧನೆ ಗೈದಿದ್ದ ಭಾರತ (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.
ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳ ಕಳಪೆ ಪ್ರದರ್ಶನ ಮತ್ತು ಸ್ಟಾರ್ ಬ್ಯಾಟರ್ಗಳ ವೈಫಲ್ಯ ತಂಡದ ಸೋಲಿಗೆ ಮುಖ್ಯ ಕಾರಣವಾಯಿತು.
ಕಿವೀಸ್ ಪಡೆ 21 ರನ್ಗಳ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ನ್ಯೂಜಿಲೆಂಡ್ ಡೆವೊನ್ ಕಾನ್ವೆ (52) ಹಾಗೂ ಡೆರಲ್ ಮಿಚೆಲ್(59) ಅವರ ಅರ್ಧಶತಕಗಳ ನೆರವಿನಿಂದ 176 ರನ್ ಪೇರಿಸಿತು. ಫಿನ್ ಅಲೆನ್ 35, ಗ್ಲೇನ್ ಫಿಲ್ಲಿಪ್ಸ್ 17 ರನ್ಗಳ ಕೊಡುಗೆ ನೀಡಿದರು.
ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಶಿವಂ ತಲಾ ಒಂದು ವಿಕೆಟ್ ಪಡೆದರು.
177 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ಹಾರ್ದಿಕ್ ಪಾಂಡ್ಯ (21) ಹಾಗೂ ಸೂರ್ಯಕುಮಾರ್ ಯಾದವ್(47) ಜೊತೆಯಾಟದ ಮೂಲಕ ಭರವಸೆ ಮೂಡಿಸಿದರೂ ಗೆಲುವಿನ ಹತ್ತಿರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
ಆಲ್ರೌಂಡರ್ ವಾಷಿಂಗ್ಟನ್ ಸುಂದರ್ 28 ಎಸೆತಗಳಲ್ಲಿ 50 ರನ್ ಬಾರಿಸಿದರೂ ಸಹ ಇತರೆ ಬ್ಯಾಟರ್ಗಳು ಸಾಥ್ ನೀಡಲಿಲ್ಲ. ಅಂತಿಮವಾಗಿ ಭಾರತ 20 ಓವರ್ಗಳಲ್ಲಿ 9 ವಿಕೆಟ್ಗೆ 155 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು.
Published On - 11:52 am, Sat, 28 January 23