IND vs NZ 1st T20I: ಭಾರತ-ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು
India vs New Zealand: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್ಸ್ವೀಪ್ ಸಾಧನೆ ಗೈದಿದ್ದ ಭಾರತ ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.
1 / 7
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್ಸ್ವೀಪ್ ಸಾಧನೆ ಗೈದಿದ್ದ ಭಾರತ (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ.
2 / 7
ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳ ಕಳಪೆ ಪ್ರದರ್ಶನ ಮತ್ತು ಸ್ಟಾರ್ ಬ್ಯಾಟರ್ಗಳ ವೈಫಲ್ಯ ತಂಡದ ಸೋಲಿಗೆ ಮುಖ್ಯ ಕಾರಣವಾಯಿತು.
3 / 7
ಕಿವೀಸ್ ಪಡೆ 21 ರನ್ಗಳ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
4 / 7
ನ್ಯೂಜಿಲೆಂಡ್ ಡೆವೊನ್ ಕಾನ್ವೆ (52) ಹಾಗೂ ಡೆರಲ್ ಮಿಚೆಲ್(59) ಅವರ ಅರ್ಧಶತಕಗಳ ನೆರವಿನಿಂದ 176 ರನ್ ಪೇರಿಸಿತು. ಫಿನ್ ಅಲೆನ್ 35, ಗ್ಲೇನ್ ಫಿಲ್ಲಿಪ್ಸ್ 17 ರನ್ಗಳ ಕೊಡುಗೆ ನೀಡಿದರು.
5 / 7
ಭಾರತ ಪರ ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರೆ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಶಿವಂ ತಲಾ ಒಂದು ವಿಕೆಟ್ ಪಡೆದರು.
6 / 7
177 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ಹಾರ್ದಿಕ್ ಪಾಂಡ್ಯ (21) ಹಾಗೂ ಸೂರ್ಯಕುಮಾರ್ ಯಾದವ್(47) ಜೊತೆಯಾಟದ ಮೂಲಕ ಭರವಸೆ ಮೂಡಿಸಿದರೂ ಗೆಲುವಿನ ಹತ್ತಿರಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
7 / 7
ಆಲ್ರೌಂಡರ್ ವಾಷಿಂಗ್ಟನ್ ಸುಂದರ್ 28 ಎಸೆತಗಳಲ್ಲಿ 50 ರನ್ ಬಾರಿಸಿದರೂ ಸಹ ಇತರೆ ಬ್ಯಾಟರ್ಗಳು ಸಾಥ್ ನೀಡಲಿಲ್ಲ. ಅಂತಿಮವಾಗಿ ಭಾರತ 20 ಓವರ್ಗಳಲ್ಲಿ 9 ವಿಕೆಟ್ಗೆ 155 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲು ಕಂಡಿತು.
Published On - 11:52 am, Sat, 28 January 23