- Kannada News Photo gallery Cricket photos IND vs NZ 1st test Tim Southee breaks Virender Sehwag's unique record in bengaluru test
IND vs NZ: ಸಿಕ್ಸ್ ಸಿಡಿಸುವುದರಲ್ಲಿ ಸೆಹ್ವಾಗ್ ದಾಖಲೆ ಮುರಿದ ಟಿಮ್ ಸೌಥಿ
IND vs NZ: ಟೀಂ ಇಂಡಿಯಾ ವಿರುದ್ಧ ಸ್ಮರಣೀಯ ಇನ್ನಿಂಗ್ಸ್ ಆಡಿದ 35 ವರ್ಷದ ಬೌಲರ್ ಟಿಮ್ ಸೌಥಿ 65 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಬೃಹತ್ ಮೊತ್ತದ ಕೊಂಡೊಯ್ಯುವಲ್ಲಿ ನೆರವಾದರು. ಇದೇ ವೇಳೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸೌಥಿ ಮುರಿದರು.
Updated on: Oct 18, 2024 | 2:30 PM

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸಂಪೂರ್ಣ ಪ್ರಾಬಲ್ಯ ಮೆರೆದಿದ್ದು, 402 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 356 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ತಂಡದ ಪರ ರಚಿನ್ ರವೀಂದ್ರ ಶತಕದ ಇನ್ನಿಂಗ್ಸ್ ಆಡಿದರೆ, ಕಾನ್ವೇ ಹಾಗೂ ಸೌಥಿ ಅರ್ಧಶತಕ ಬಾರಿಸಿದರು.

ಅದರಲ್ಲೂ ಟೀಂ ಇಂಡಿಯಾ ವಿರುದ್ಧ ಸ್ಮರಣೀಯ ಇನ್ನಿಂಗ್ಸ್ ಆಡಿದ 35 ವರ್ಷದ ಬೌಲರ್ ಟಿಮ್ ಸೌಥಿ 65 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಬೃಹತ್ ಮೊತ್ತದ ಕೊಂಡೊಯ್ಯುವಲ್ಲಿ ನೆರವಾದರು. ಇದೇ ವೇಳೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸೌಥಿ ಮುರಿದರು.

ಭಾರತದ ವಿರುದ್ಧ ಟೆಸ್ಟ್‌ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ಸೌಥಿ ಕೇವಲ 57 ಎಸೆತಗಳಲ್ಲಿ 50 ರನ್‌ಗಳ ಗಡಿ ಮುಟ್ಟಿದರು. ಇದು ಅವರ ಟೆಸ್ಟ್ ವೃತ್ತಿಜೀವನದ 7ನೇ ಅರ್ಧಶತಕವಾಗಿದೆ. ಟಿಮ್ ಸೌಥಿ ಅವರ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಈ ಮೂರು ಸಿಕ್ಸರ್‌ಗಳೊಂದಿಗೆ ಟಿಮ್ ಸೌಥಿ, ಟೆಸ್ಟ್‌ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದರು.

ಟೀಂ ಇಂಡಿಯಾ ವಿರುದ್ಧ ಮೂರು ಸಿಕ್ಸರ್ ಸಿಡಿಸುವ ಮೂಲಕ ಟಿಮ್ ಸೌಥಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 92 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯಲ್ಲಿ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದ್ದಾರೆ. ವೀರೇಂದ್ರ ಸೆಹ್ವಾಗ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 91 ಸಿಕ್ಸರ್‌ಗಳನ್ನು ಬಾರಿಸಿದ್ದರು.

ಇದೀಗ ತಮ್ಮ ಟೆಸ್ಟ್ ಸಿಕ್ಸರ್ಗಳ ಸಂಖ್ಯೆಯನ್ನು 92ಕ್ಕೇರಿಸಿಕೊಂಡಿರುವ ಟಿಮ್ ಸೌಥಿ ಸಿಡಿಲಮರಿ ಸೆಹ್ವಾಗ್ರನ್ನು ಹಿಂದಿಕ್ಕಿದ್ದಾರೆ. ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಷಯದಲ್ಲಿ ಟಿಮ್ ಸೌಥಿಗಿಂತ ಕೇವಲ 5 ಬ್ಯಾಟ್ಸ್‌ಮನ್‌ಗಳು ಮುಂದಿದ್ದು, ಇಂಗ್ಲೆಂಡ್ನ ಬೆನ್ ಸ್ಟೋಕ್ಸ್ 131 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ನ್ಯೂಜಿಲೆಂಡ್ ತಂಡದ ಮೊದಲ ಇನ್ನಿಂಗ್ಸ್ ಬಗ್ಗೆ ಹೇಳುವುದಾದರೆ.. ಕಿವೀಸ್ ಪಡೆ ಮೂರನೇ ದಿನದಾಟದ ಮೊದಲ ಇನ್ನಿಂಗ್ಸ್‌ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 402 ರನ್ಗಳಿಗೆ ಆಲೌಟ್ ಆಯಿತು. ತಂಡ ಈ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದ ಟಿಮ್ ಸೌಥಿ 8ನೇ ವಿಕೆಟ್‌ಗೆ ರಚಿನ್ ರವೀಂದ್ರ ಜೊತೆಗೂಡಿ 130ಕ್ಕೂ ಹೆಚ್ಚು ರನ್ ಸೇರಿಸುವಲ್ಲಿ ಯಶಸ್ವಿಯಾದರು.
