IND vs NZ 2nd T20I: ಭಾರತ-ನ್ಯೂಜಿಲೆಂಡ್ ದ್ವಿತೀಯ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು
India vs New Zealand 2nd T20I: ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ ರೋಚಕ ಜಯ ಸಾಧಿಸಿತು.
1 / 8
ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ಭಾರತ (India vs New Zealand) ರೋಚಕ ಜಯ ಸಾಧಿಸಿತು.
2 / 8
ಉಪ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 6 ವಿಕೆಟ್ಗಳ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.
3 / 8
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು. ಕಿವೀಸ್ ಪರ ನಾಯಕ ಮಿಚೆಕ್ ಸ್ಯಾಂಟನರ್ 19 ರನ್ ಗಳಿಸಿದ್ದೇ ಹೆಚ್ಚು. ಉಳಿದ ಯಾವ ಬ್ಯಾಟರ್ಗಳ ಸ್ಕೋರ್ 15ರ ಗಡಿ ದಾಟಲಿಲ್ಲ.
4 / 8
ಭಾರತ ಪರ ಅರ್ಶ್ದೀಪ್ 2, ಪಾಂಡ್ಯ, ಸುಂದರ್, ಚಹಲ್, ಹೂಡ ಹಾಗೂ ಕುಲ್ದೀಪ್ ತಲಾ 1 ವಿಕೆಟ್ ಪಡೆದರು.
5 / 8
ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ರೋಚಕ 6 ವಿಕೆಟ್ಗಳ ಜಯ ಸಾಧಿಸಿತು. ಕೊನೆಯ ಓವರ್ ವರೆಗೂ ನಡೆದ ಲೋಸ್ಕೋರ್ ಗೇಮ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಸುಳ್ಳಲ್ಲ. ಈ ಪಿಚ್ ಆರೀತಿಯಲ್ಲಿತ್ತು.
6 / 8
31 ಎಸೆತಗಳಲ್ಲಿ 1 ಫೋರ್ ಜೊತೆಗೆ ಅಜೇಯ 26 ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.
7 / 8
ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ ಅಜೇಯ 15 ರನ್ ಬಾರಿಸಿದರು. ಅಂತಿಮ ನಿರ್ಣಾಯಕ ಟಿ20 ಪಂದ್ಯ ಫೆಬ್ರವರಿ 1 ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
8 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡದ ಕಡೆಯಿಂದ ಒಂದೂ ಸಿಕ್ಸರ್ ದಾಖಲಾಗಲಿಲ್ಲ. ಭಾರತದಲ್ಲಿ ಒಂದೂ ಸಿಕ್ಸರ್ ಇಲ್ಲದೇ ಇನ್ನಿಂಗ್ಸ್ ಮುಕ್ತಾಯ ಮಾಡಿದ ಕಳಪೆ ಸಾಧನೆಯನ್ನು ಕಿವೀಸ್ ಮಾಡಿದೆ.