ಕನ್ನಡಿಗ ಕೆಎಲ್ ರಾಹುಲ್ ಅತ್ಯಂತ ಪ್ರತಿಭಾನ್ವಿತ ಬ್ಯಾಟ್ಸ್‌ಮನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ, ಆದರೆ ಕಳೆದ ಕೆಲವು ದಿನಗಳಿಂದ ರಾಹುಲ್ ಅವರ ಬ್ಯಾಟ್ ಮೌನಕ್ಕೆ ಶರಣಾಗಿದೆ. ಅಲ್ಲದೆ ಅವಶ್ಯಕ ಸಮಯದಲ್ಲಿ ರಾಹುಲ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವುತ್ತಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಇದೇ ಸಮಸ್ಯೆಗೆ ಸಿಲುಕಿದ್ದ ರಾಹುಲ್, ಇದೀಗ ನ್ಯೂಜಿಲೆಂಡ್ ವಿರುದ್ಧವೂ ಲಯ ಕಂಡುಕೊಳ್ಳುವಲ್ಲಿ ಎಡವುತ್ತಿದ್ದಾರೆ.