ಅಂದಹಾಗೆ, ಇಂದೋರ್‌ನಲ್ಲಿ ಟೀಂ ಇಂಡಿಯಾ ಇನ್ನೂ ಒಂದು ವಿಶೇಷ ದಾಖಲೆ ಮಾಡುವ ಅವಕಾಶ ಹೊಂದಿದೆ. ಅದೆನೆಂದರೆ, ಇದುವರೆಗೆ ಹೋಳ್ಕರ್ ಸ್ಟೇಡಿಯಂನಲ್ಲಿ 5 ಏಕದಿನ ಪಂದ್ಯಗಳು ನಡೆದಿದ್ದು, ಈ ಐದು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯ ಸಾಧಿಸಿದೆ. ಈಗ ನಡೆಯುವ 6ನೇ ಏಕದಿನ ಪಂದ್ಯದಲ್ಲೂ ಗೆಲುವ ಸಾಧಿಸಿದರೆ, ಈ ಮೈದಾನದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನೂ ಗೆದ್ದ ದಾಖಲೆಯನ್ನು ಟೀಂ ಇಂಡಿಯಾ ಬರೆಯಲಿದೆ.