AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

India vs New Zealand, 4th T20I: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನುಳಿದಿರುವ ಎರಡು ಮ್ಯಾಚ್​ಗಳು ಔಪಚಾರಿಕ. ಹೀಗಾಗಿ ಟೀಮ್ ಇಂಡಿಯಾ ಕೊನೆಯ ಎರಡು ಪಂದ್ಯಗಳ ವೇಳೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. 

ಝಾಹಿರ್ ಯೂಸುಫ್
|

Updated on: Jan 28, 2026 | 8:27 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ.

1 / 5
ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಯಾಗಿದೆ.

2 / 5
ಹಾರ್ದಿಕ್ ಪಾಂಡ್ಯ ಹೊರಗುಳಿದರೆ ಫಿಟ್​ನೆಸ್ ಸಮಸ್ಯೆಯ ಕಾರಣ ಕಳೆದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯದ ಅಕ್ಷರ್ ಪಟೇಲ್​​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಇನ್ನು ಅಕ್ಷರ್ ಪಟೇಲ್ ಈ ಪಂದ್ಯಕ್ಕೂ ಫಿಟ್ ಆಗಿರದೇ ಇದ್ದರೆ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

3 / 5
ಇನ್ನು ಈ ಪಂದ್ಯದಿಂದ ಹರ್ಷಿತ್ ರಾಣಾ ಕೂಡ ಹೊರಗುಳಿದರೆ ಅಚ್ಚರಿಪಡಬೇಕಿಲ್ಲ. ಏಕೆಂದರೆ ಕಳೆದ ಪಂದ್ಯದ ವೇಳೆ ಅರ್ಷದೀಪ್ ಸಿಂಗ್​​ಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಈ ಪಂದ್ಯದಲ್ಲಿ ಅರ್ಷದೀಪ್​​ ಸಿಂಗ್​ ಅವರನ್ನು ಕಣಕ್ಕಿಳಿಸಿದ ಹರ್ಷಿತ್​ಗೆ ರೆಸ್ಟ್ ನೀಡುವ ಸಾಧ್ಯತೆಯಿದೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಈ ಮ್ಯಾಚ್​ನಲ್ಲಿ ವರುಣ್ ಚಕ್ರವರ್ತಿ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 5
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

5 / 5
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?

ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ

ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ

HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ