AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26766 ಎಸೆತಗಳಲ್ಲಿ ನಾಥನ್​ ಲಿಯಾನ್​ನ ಹಿಂದಿಕ್ಕಿದ ರವಿಚಂದ್ರನ್ ಅಶ್ವಿನ್

Ravichandran Ashwin: ಟೆಸ್ಟ್ ಕ್ರಿಕೆಟ್​ನಲ್ಲಿ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಬೇಟೆ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ 2 ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Oct 24, 2024 | 1:53 PM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 7ನೇ ಸ್ಥಾನಕ್ಕೇರಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ ಈ ಸಾಧನೆ ಮಾಡಿದ್ದಾರೆ.

1 / 5
ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದರು. 242 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಒಟ್ಟು 32761 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 530 ವಿಕೆಟ್ ಕಬಳಿಸಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ 7ನೇ ಬೌಲರ್ ಎನಿಸಿಕೊಂಡಿದ್ದರು.

2 / 5
ಆದರೀಗ ಲಿಯಾನ್ ಅವರನ್ನು ಹಿಂದಿಕ್ಕುವ ಮೂಲಕ ರವಿಚಂದ್ರನ್ ಅಶ್ವಿನ್ ತಮ್ಮ ವಿಕೆಟ್ ಬೇಟೆ ಮುಂದುವರೆಸಿದ್ದಾರೆ. ಈವರೆಗೆ 196 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅಶ್ವಿನ್, ಒಟ್ಟು 26766* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 531 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ವಿಶ್ವದ 7ನೇ ಬೌಲರ್​ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇನ್ನು ಈ ಮೂರು ವಿಕೆಟ್​ಗಳೊಂದಿಗೆ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನಾಥನ್ ಲಿಯಾನ್ (187) ಹೆಸರಿನಲ್ಲಿತ್ತು. ಆದರೀಗ 189* ವಿಕೆಟ್​ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

4 / 5
ಅಂದಹಾಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 230 ಟೆಸ್ಟ್ ಇನಿಂಗ್ಸ್​ಗಳಲ್ಲಿ 44039 ಎಸೆತಗಳನ್ನು ಎಸೆದಿರುವ ಮುರಳೀಧರನ್ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?