ಅವಮಾನ… ಟೆಸ್ಟ್ ಇತಿಹಾಸದಲ್ಲೇ ಅವಮಾನಕರ ಸೋಲುಂಡ ಟೀಮ್ ಇಂಡಿಯಾ

India vs New Zealand, 3rd Test: ಭಾರತದ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ನ್ಯೂಝಿಲೆಂಡ್, 2ನೇ ಪಂದ್ಯವನ್ನು 113 ರನ್​ಗಳಿಂದ ಗೆದ್ದುಕೊಂಡಿತ್ತು. ಇದೀಗ 3ನೇ ಪಂದ್ಯದಲ್ಲಿ 25 ರನ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 1:43 PM

ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ 3 ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡವನ್ನು ತವರಿನಲ್ಲಿ ಬಗ್ಗು ಬಡಿದು ನ್ಯೂಝಿಲೆಂಡ್ ಹೊಸ ಇತಿಹಾಸ ರಚಿಸಿದೆ.

1 / 5
ಈ ಮೂಲಕ ಭಾರತ ತಂಡವನ್ನು ತವರಿನಲ್ಲಿ 3-0 ಅಂತರದಿಂದ ಸೋಲಿಸಿದ ಮೊದಲ ತಂಡವೆಂಬ ವಿಶೇಷ ದಾಖಲೆಯೊಂದನ್ನು ನ್ಯೂಝಿಲೆಂಡ್ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ 1958 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು 3-0 ಅಂತರದಿಂದ ಸರಣಿ ಸೋತಿದ್ದರೂ, ಅದು 5 ಪಂದ್ಯಗಳ ಸರಣಿಯಾಗಿತ್ತು. ಅಲ್ಲದೆ ಆ ಸರಣಿಯ ಎರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು.

2 / 5
ಆದರೆ ಇದೇ ಮೊದಲ ಬಾರಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ 92 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಅವಮಾನಕರ ಸೋಲಿಗೆ ಕೊರೊಳೊಡ್ಡಿದೆ. ಅಷ್ಟೇ ಅಲ್ಲದೆ 24 ವರ್ಷಗಳ ಬಳಿಕ ತವರಿನಲ್ಲಿ ವೈಟ್ ವಾಶ್ ಆಗಿದೆ.

3 / 5
ಭಾರತ ತಂಡವು ತವರಿನಲ್ಲಿ ಕೊನೆಯ ಬಾರಿ ವೈಟ್ ವಾಶ್ ಸೋಲು ಎದುರಿಸಿದ್ದು 2000 ರಲ್ಲಿ. ಅಂದು ಸೌತ್ ಆಫ್ರಿಕಾ ತಂಡವು ಭಾರತವನ್ನು 2-0 ಅಂತರದಿಂದ ಮಣಿಸಿ ಇತಿಹಾಸ ಬರೆದಿತ್ತು. ಇದೀಗ 24 ವರ್ಷಗಳ ಬಳಿಕ ಕಿವೀಸ್ ಪಡೆ ಭಾರತ ತಂಡಕ್ಕೆ ಮತ್ತೆ ವೈಟ್ ವಾಶ್ ಸೋಲಿನ ರುಚಿ ತೋರಿಸಿದೆ.

4 / 5
ಇದೀಗ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿಯೇ ಅವಮಾನಕರ ರೀತಿಯಲ್ಲಿ ಸೋಲುಂಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಸಜ್ಜಾಗಬೇಕಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಸರಣಿಯ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲಿದೆಯಾ ಕಾದು ನೋಡಬೇಕಿದೆ.

5 / 5
Follow us
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ