
ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ 20 ವರ್ಷಗಳ ಗೆಲುವಿನ ಬರವನ್ನು ನೀಗಿಸಿಕೊಂಡಿದೆ.

ಈ ಪಂದ್ಯದಲ್ಲಿ ಮಾರ್ಕ್ ಚಾಪ್‌ಮನ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದ ಬುಮ್ರಾ ಏಕದಿನ ವಿಶ್ವಕಪ್‌ನಲ್ಲಿ ಲೆಜೆಂಡರಿ ಆಲ್‌ರೌಂಡರ್ ಮತ್ತು ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ 28 ವಿಕೆಟ್‌ಗಳ ದಾಖಲೆಯನ್ನು ಮುರಿದರು.

1983 ರ ಏಕದಿನ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ಭಾರತದ ಪರ ನಾಲ್ಕು ವಿಶ್ವಕಪ್ ಆವೃತ್ತಿಗಳಲ್ಲಿ ಒಟ್ಟು 26 ಪಂದ್ಯಗಳಲ್ಲಿ ಆಡಿ 28 ವಿಕೆಟ್‌ಗಳನ್ನು ಪಡೆದಿದ್ದರು.

ಆದರೆ ಕೇವಲ 14 ಪಂದ್ಯಗಳನ್ನಾಡಿರುವ ಬುಮ್ರಾ ಅವರ ಹೆಸರಿನಲ್ಲಿ ಇದೀಗ 29 ವಿಕೆಟ್ಗಳು ದಾಖಲಾಗಿವೆ.

ಈ ಮೂಲಕ ಬುಮ್ರಾ ಏಕದಿನ ವಿಶ್ವಕಪ್‌ನಲ್ಲಿ ಅಧಿಕ ವಿಕೆಟ್ ಪಡೆದಿರುವ ಭಾರತದ ಐದನೇ ಬೌಲರ್ ಎನಿಸಿಕೊಂಡರು.

ಈ ಪಟ್ಟಿಯಲ್ಲಿ ತಲಾ 44 ವಿಕೆಟ್ ಪಡೆದಿರುವ ಜಹೀರ್ ಖಾನ್ ಮತ್ತು ಜಾವಗಲ್ ಶ್ರೀನಾಥ್ ಅಗ್ರಸ್ಥಾನದಲ್ಲಿದ್ದಾರೆ.

ಆ ನಂತರ 12 ಪಂದ್ಯಗಳಲ್ಲಿ 36 ವಿಕೆಟ್‌ಗಳನ್ನು ಪಡೆದಿರುವ ಮೊಹಮ್ಮದ್ ಶಮಿ ಎರಡನೇ ಸ್ಥಾನದಲ್ಲಿದ್ದಾರೆ.

ಮಾಜಿ ಟೆಸ್ಟ್ ನಾಯಕ ಅನಿಲ್ ಕುಂಬ್ಳೆ 18 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 31 ಬ್ಯಾಟರ್‌ಗಳನ್ನು ಔಟ್ ಮಾಡುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ 14 ಪಂದ್ಯಗಳಲ್ಲಿ 29 ವಿಕೆಟ್ ಪಡೆದಿರುವ ಜಸ್ಪ್ರೀತ್ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದಾರೆ.